ಭದ್ರಾವತಿ ಹಳೇನಗರ ಠಾಣೆ ಪೊಲೀಸರು ಭಾನುವಾರ ಸುಮಾರು ೧ ಕೆ.ಜಿ ೪೯೦ ಗ್ರಾಂ. ಒಣ ಗಾಂಜಾ ವಶಪಡಿಸಿಕೊಂಡಿರುವ ಘಟನೆ ನಡೆದಿದೆ.
ಭದ್ರಾವತಿ, ಜೂ. ೧೯: ಇತ್ತೀಚಿನ ವರ್ಷಗಳಲ್ಲಿ ಕ್ಷೇತ್ರದಲ್ಲಿ ಗಾಂಜಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಎಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದರೂ ಸಹ ಸದ್ದಿಲ್ಲದೆ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಹಳೇನಗರ ಠಾಣೆ ಪೊಲೀಸರು ಭಾನುವಾರ ಸುಮಾರು ೧ ಕೆ.ಜಿ ೪೯೦ ಗ್ರಾಂ. ಒಣ ಗಾಂಜಾ ವಶಪಡಿಸಿಕೊಂಡಿರುವ ಘಟನೆ ನಡೆದಿದೆ.
ಖಚಿತ ಮಾಹಿತಿ ಆಧಾರದ ಮೇರೆಗೆ ನಗರಸಭೆ ವ್ಯಾಪ್ತಿಯ ಜಟ್‌ಪಟ್ ನಗರದ ವೀರಶೈವ ರುದ್ರಭೂಮಿ ಬಳಿ ದಾಳಿ ನಡೆಸಿ ನಸ್ರುಲ್ಲಾ ಅಲಿಯಾಸ್ ನಸ್ರು(೧೯) ಮತ್ತು ಸೈಫ್ ಆಲಿ ಖಾನ್(೨೫) ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರಿಂದ ಒಟ್ಟು ಸುಮಾರು ೩೪,೪೦೦ ರು. ಮೌಲ್ಯದ ೧ ಕೆ.ಜಿ ೪೯೦ ಗ್ರಾಂ ಒಣ ಗಾಂಜಾ ಹಾಗು ೭೦೦ ರು. ನಗದು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಹಳೇನಗರ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.
ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಠಾಣಾಧಿಕಾರಿ ಶರಣಪ್ಪ ನೇತೃತ್ವದ ತಂಡವನ್ನು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ ಮಿಥುನ್‌ಕುಮಾರ್, ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಹಾಗು ಪೊಲೀಸ್ ಉಪಾಧೀಕ್ಷಕರು ಅಭಿನಿಂದಿಸಿದ್ದಾರೆ.
No comments:
Post a Comment