ಮಂಗಳವಾರ, ಜೂನ್ 20, 2023

ಡಾ. ಬಿ.ಆರ್ ಅಂಬೇಡ್ಕರ್ ಭವನ ಸಂರಕ್ಷಣಾ ಸಮಿತಿಯಿಂದ ಜಾಗೃತಿ ಸಭೆ

ಮುಂದಿನ ಹೋರಾಟದ ರೂಪುರೇಷೆ ಕುರಿತು ಚರ್ಚೆ

ಭದ್ರಾವತಿಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಭವನ ಸಂರಕ್ಷಣಾ ಸಮಿತಿ ವತಿಯಿಂದ ಮಂಗಳವಾರ ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಜಾಗೃತಿ ಸಭೆ ನಡೆಯಿತು.
    ಭದ್ರಾವತಿ, ಜೂ. ೨೦ :  ಡಾ. ಬಿ.ಆರ್ ಅಂಬೇಡ್ಕರ್ ಭವನ ಸಂರಕ್ಷಣಾ ಸಮಿತಿ ವತಿಯಿಂದ ಮಂಗಳವಾರ ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಜಾಗೃತಿ ಸಭೆ ನಡೆಯಿತು.
    ಹಿರಿಯ ಕಾರ್ಮಿಕ ಮುಖಂಡ ಕಾಂಮ್ರೇಡ್ ಡಿ.ಸಿ ಮಾಯಣ್ಣ ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಸಭೆ ಉದ್ಘಾಟಿಸಿದರು.
ನಂತರ ಸಮಿತಿ ವತಿಯಿಂದ ಅಂಬೇಡ್ಕರ್ ಭವನ ಪರಿಶೀಲನೆ ನಡೆಯಿತು. ಈ ಸಂದರ್ಭದಲ್ಲಿ ಭವನ ನಿರ್ಮಾಣದ ಜವಾಬ್ದಾರಿ ವಹಿಸಿಕೊಂಡಿರುವ ಶಿವಮೊಗ್ಗ ನಿರ್ಮಿತಿ ಕೇಂದ್ರದ ಪರವಾಗಿ ಇಂಜಿನಿಯರ್ ಜಿತೇಂದ್ರ ಕೈಗೊಂಡಿರುವ ಕಾಮಗಾರಿ ಕುರಿತು ವಿವರ ನೀಡಿದರು. ಶೀಘ್ರದಲ್ಲಿಯೇ ಎಲ್ಲಾ ಕಾಮಗಾರಿ ಮುಕ್ತಾಯಗೊಳಿಸುವ ಭರವಸೆ ನೀಡಿದರು.
ಈ ನಡುವೆ ಸಮಿತಿ ವತಿಯಿಂದ ತಕ್ಷಣ ಅಂಬೇಡ್ಕರ್ ಭವನ ಅವ್ಯವಸ್ಥೆ ಸರಿಪಡಿಸಿ ಸಾರ್ವಜನಿಕರ ಬಳಕೆಗೆ ಅವಕಾಶ ನೀಡುವ ನಿಟ್ಟಿನಲ್ಲಿ ಮುಂದಿನ ಹೋರಾಟದ ರೂಪುರೇಷೆ ಕುರಿತು ಚರ್ಚಿಸಲಾಯಿತು.
ಡಿಎಸ್‌ಎಸ್ ಮುಖಂಡರಾದ ವಿಜಯಮ್ಮ ಎನ್ ಗಿರಿಯಪ್ಪ ಅಧ್ಯಕ್ಷತೆ ವಹಿಸಿದ್ದರು. ಡಾ. ಬಿ.ಆರ್ ಅಂಬೇಡ್ಕರ್ ಭವನ ಸಂರಕ್ಷಣಾ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಪ್ರಮುಖರಾದ ಎಲ್.ವಿ ರುದ್ರಪ್ಪ, ಸಿದ್ದಲಿಂಗಯ್ಯ, ಟಿ. ವೆಂಕಟೇಶ್, ಫೀರ್‌ಷರೀಪ್, ನರಸಿಂಹಚಾರ್, ಎಂ. ನಾರಾಯಣ, ಯಲ್ಲೋಜಿರಾವ್, ಅನಂತರಾಮು, ಆಂಜನೇಯ, ಚಂದ್ರಶೇಖರ್, ಶಶಿಕುಮಾರ್ ಗೌಡ, ಹಫೀಜ್ ಉರ್ ರಹಮಾನ್, ಟಿ.ಜಿ ಬಸವರಾಜಯ್ಯ, ಉಕ್ಕುಂದ ಶಿವಕುಮಾರ್, ಕಮಲಕರ್, ಜಗದೀಶ್, ಬ್ರಹ್ಮಲಿಂಗಯ್ಯ, ಮುತ್ತು, ತಿರುಪಾಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ