ಚಾಲನೆ ನೀಡಿ ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್ ಸ್ಪಷ್ಟನೆ
ಭದ್ರಾವತಿ ತಾಲೂಕಿನಾದ್ಯಂತ ಜು.೬ರವರೆಗೆ ಆರೋಗ್ಯ ಇಲಾಖೆಯಿಂದ ಕುಷ್ಠರೋಗ ಪತ್ತೆ ಹಚ್ಚುವ ಅಂದೋಲನ ಹಮ್ಮಿಕೊಳ್ಳಲಾಗಿದ್ದು, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಅಂದೋಲನಕ್ಕೆ ಚಾಲನೆ ನೀಡಿದರು.
ಭದ್ರಾವತಿ, ಜೂ. ೨೦ : ತಾಲೂಕಿನಾದ್ಯಂತ ಜು.೬ರವರೆಗೆ ಆರೋಗ್ಯ ಇಲಾಖೆಯಿಂದ ಕುಷ್ಠರೋಗ ಪತ್ತೆ ಹಚ್ಚುವ ಅಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್ ಹೇಳಿದರು.
ಅವರು ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಅಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದರು. ತಾಲೂಕಿನ ೮೨,೨೬೭ ಮನೆಗಳ ೧,೧೭,೩೭೦ ಜನರ ಸಮೀಕ್ಷೆ ನಡೆಸಲಾಗುವುದು. ಈ ಕಾರ್ಯದಲ್ಲಿ ಇಲಾಖೆ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಹಾಗು ಸ್ವಯಂ ಸೇವಕರನ್ನು ಒಳಗೊಂಡ ೨೯೩ ತಂಡಗಳು ಪಾಲ್ಗೊಳ್ಳಲಿವೆ. ಈಗಾಗಲೇ ಮನೆ-ಮನೆ ಸಮೀಕ್ಷೆ ಮತ್ತು ಪರೀಕ್ಷೆ ಕಾರ್ಯಕ್ರಮ ಅರಂಭವಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವ ಮೂಲಕ ಸಂಶಯಾತ್ಮಕ ಚರ್ಮರೋಗದ ಲಕ್ಷಣಗಳಿರುವ ವ್ಯಕ್ತಿಗಳು ಪರೀಕ್ಷೆ ಮಾಡಿಸಿಕೊಂಡು ಕುಷ್ಠರೋಗ ಪತ್ತೆ ಹಚ್ಚುವಲ್ಲಿ ಸಹಕರಿಸಬೇಕೆಂದು ಕೋರಿದರು.
ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಡಿ.ಎಸ್ ಶಿವಪ್ರಕಾಶ್, ವೈದ್ಯರಾದ ಡಾ. ರಶ್ಮಿ, ಡಾ. ಮಯೂರಿ, ಡಾ. ಕಿರಣ್, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಕೆ. ಸುಶೀಲಾ ಬಾಯಿ, ಆನಂದ ಮೂರ್ತಿ, ಜಿಲ್ಲಾ ಕಛೇರಿಯ ಉಮೇಶ್, ಮಧು, ಮೋಹನ್, ಹಾಲೇಶ್, ವಸಂತ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment