Saturday, June 17, 2023

ಜೂ.೨೦ರಂದು ಜನಸಂಪರ್ಕ ಸಭೆ

    ಭದ್ರಾವತಿ, ಜೂ. ೧೭ : ಮೆಸ್ಕಾಂ ಗ್ರಾಮೀಣ ಉಪವಿಭಾಗದ ಕಛೇರಿಯಲ್ಲಿ ಜೂ.೨೦ರಂದು ಬೆಳಿಗ್ಗೆ ೧೧ ಗಂಟೆಯಿಂದ ಮಧ್ಯಾಹ್ನ ೧ ಗಂಟೆವರೆಗೆ ಜನ ಸಂಪರ್ಕ ಸಭೆ ಹಮ್ಮಿಕೊಳ್ಳಲಾಗಿದೆ.
    ಗ್ರಾಮೀಣ ವ್ಯಾಪ್ತಿಯ ಗ್ರಾಹಕರು ಕುಂದುಕೊರತೆ/ಅಹವಾಲುಗಳನ್ನು ಸಭೆಯ ಅಧ್ಯಕ್ಷತೆವಹಿಸಲಿರುವ ಅಧೀಕ್ಷಕ ಇಂಜಿನಿಯರ್(ವಿ)/ವಿಭಾಗೀಯ ಅಧಿಕಾರಿಗೆ ಸಲ್ಲಿಸುವ ಮೂಲಕ ಈ ಅವಕಾಶ ಸದುಪಯೋಗಪಡಿಸಿಕೊಳ್ಳುವಂತೆ ಕೋರಲಾಗಿದೆ.
    ಕಾರೇಹಳ್ಳಿ, ಬಾರಂದೂರು, ಅಂತರಗಂಗೆ, ದೊಡ್ಡೇರಿ, ಬಿಆರ್‌ಪಿ, ದೊಣಬಘಟ್ಟ, ತಡಸ, ಬಿಳಿಕಿ, ಅರಳಿಕೊಪ್ಪ, ಕಂಬದಾಳ್ ಹೊಸೂರು, ಅರಳಿಹಳ್ಳಿ, ಕೂಡ್ಲಿಗೆರೆ, ಅತ್ತಿಗುಂದ, ವೀರಾಪುರ, ಕಲ್ಲಹಳ್ಳಿ ಸುತ್ತಮುತ್ತಲಿನ ಪ್ರದೇಶಗಳ ಗ್ರಾಹಕರು ಜನಸಂಪರ್ಕ ಸಭೆಯಲ್ಲಿ ಭಾಗವಹಿಸಬಹುದಾಗಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

No comments:

Post a Comment