ಭದ್ರಾವತಿ ಬ್ಯಾಡ್ಮಿಂಟನ್ ಕ್ರೀಡಾಪಟು ಪವನ್‌ಕುಮಾರ್ ಎರಡು ರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾವಳಿಗಳಲ್ಲಿ ಭಾಗವಹಿಸಿ ೨ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ.
ಭದ್ರಾವತಿ, ಜೂ. ೧ : ನಗರದ ಬ್ಯಾಡ್ಮಿಂಟನ್ ಕ್ರೀಡಾಪಟು ಪವನ್‌ಕುಮಾರ್ ಎರಡು ರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾವಳಿಗಳಲ್ಲಿ ಭಾಗವಹಿಸಿ ೨ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ.
ನವದೆಹಲಿ ಜವಾಹರ್‌ಲಾಲ್ ನೆಹರು ಕ್ರೀಡಾಂಗಣದಲ್ಲಿ ಮೇ.೨೪ ರಿಂದ ೨೬ರವರೆಗೆ ನಡೆದ ಎಸ್‌ಬಿಕೆಎಫ್ ೮ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್‌ನಲ್ಲಿ ಚಿನ್ನದ ಪದಕ ಹಾಗೂ ಮೇ. ೨೬ ರಿಂದ ೨೯ರವರೆಗೆ ಹರಿಯಾಣದ ಗುರುಗ್ರಾಮ್‌ನಲ್ಲಿ ನಡೆದ ಓಪನ್ ನ್ಯಾಷನಲ್ ಸ್ಪೋರ್ಟ್ಸ್ ಚಾಂಪಿಯನ್‌ಶಿಪ್ ಪಂದ್ಯಾವಳಿಯಲ್ಲಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ.
ಪವನ್ ಕುಮಾರ್ ರವರು ಒಂದೇ ತಿಂಗಳಲ್ಲಿ ಎರಡು ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸಿ ಎರಡು ಚಿನ್ನದ ಪದಕ ತಮ್ಮದಾಗಿಸಿಕೊಳ್ಳುವ ಮೂಲಕ ತಾಲೂಕಿಗೆ ಕೀರ್ತಿ ತಂದಿದ್ದಾರೆ. ಇವರನ್ನು ನಗರದ ಕ್ರೀಡಾಪಟುಗಳು, ಕ್ರೀಡಾಭಿಮಾನಿಗಳು ಅಭಿನಂದಿಸಿದ್ದಾರೆ.
No comments:
Post a Comment