ಬಸವನಗುಡಿ ಗ್ರಾಮಸ್ಥರಿಂದ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ
ಭದ್ರಾವತಿ ತಾಲೂಕಿನ ಎರೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವನಗುಡಿ ವ್ಯಾಪ್ತಿಯಲ್ಲಿರುವ ಕೋಳಿ ಪಾರಂ ತೆರವುಗೊಳಿಸುವಂತೆ ಆಗ್ರಹಿಸಿ ಅಲ್ಲಿನ ನಿವಾಸಿಗಳು ಸೋಮವಾರ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿದರು.
ಭದ್ರಾವತಿ, ಜೂ. ೨೬: ತಾಲೂಕಿನ ಎರೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವನಗುಡಿ ವ್ಯಾಪ್ತಿಯಲ್ಲಿರುವ ಕೋಳಿ ಪಾರಂ ತೆರವುಗೊಳಿಸುವಂತೆ ಆಗ್ರಹಿಸಿ ಅಲ್ಲಿನ ನಿವಾಸಿಗಳು ಸೋಮವಾರ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿದರು.
ಗ್ರಾಮದ ಪಕ್ಕದಲ್ಲಿಯೇ ಕಡಿಮೆ ಅಂತರದಲ್ಲಿ ಕೋಳಿ ಪಾರಂ ಇದ್ದು, ಇದರಿಂದ ಈ ಭಾಗದಲ್ಲಿ ದುರ್ವಾಸನೆ ಹೆಚ್ಚಾಗುತ್ತಿದೆ. ಕಪ್ಪು ನೊಣಗಳ ಕಾಟ ಹೆಚ್ಚಾಗಿದ್ದು, ರೋಗರುಜಿನಗಳು ಹರಡುವ ಭೀತಿ ಎದುರಾಗಿದೆ. ಮನೆಗಳಲ್ಲಿ ಊಟ ಮಾಡಲು ಸಾಧ್ಯವಾಗುತ್ತಿಲ್ಲ. ಮಕ್ಕಳಲ್ಲಿ ಆಗಾಗ ವಾಂತಿ ಕಾಣಿಸಿಕೊಳ್ಳುತ್ತಿದ್ದು, ಅಲ್ಲದೆ ಸುತ್ತಮುತ್ತಲ ಪರಿಸರದಲ್ಲಿ ಸ್ವಚ್ಛತೆ ಇಲ್ಲದಂತಾಗಿದೆ. ಎಲ್ಲಿಬೇಕೆಂದರಲ್ಲಿ ಕೋಳಿ ತ್ಯಾಜ್ಯ ಕಂಡು ಬರುತ್ತಿದ್ದು, ನಾಯಿಗಳ ಹಾವಳಿ ಹೆಚ್ಚಾಗಿದೆ. ನಾಯಿಗಳು ಮಕ್ಕಳ ಮೇಲೆ ದಾಳಿ ನಡೆಸುತ್ತಿರುವ ಘಟನೆಗಳು ನಡೆಯುತ್ತಿವೆ. ಇದರಿಂದ ಒಂದೆಡೆ ಭಯದ ವಾತಾವರಣ ನಿರ್ಮಾಣವಾಗಿದ್ದು, ಬಡವರ್ಗಕ್ಕೆ ಸೇರಿರುವ ನಾವುಗಳು ಸಂಕಷ್ಟಕ್ಕೆ ಒಳಗಾಗುವಂತಾಗಿದೆ ಎಂದು ಅಳಲು ತೋರ್ಪಡಿಸಿಕೊಂಡರು.
ಈಗಾಗಲೇ ಹಲವಾರು ಬಾರಿ ಈ ಸಂಬಂಧ ಮನವಿ ಸಲ್ಲಿಸಲಾಗಿದ್ದು, ಯಾವುದೇ ಪ್ರಯೋಜನವಾಗಿಲ್ಲ. ತಕ್ಷಣ ಕೋಳಿ ಪಾರಂ ತೆರವುಗೊಳಿಸಬೇಕು. ಅಲ್ಲಿಯವರೆಗೂ ಪ್ರತಿಭಟನೆ ಮುಂದುವರೆಸುವುದಾಗಿ ಎಚ್ಚರಿಸಿದರು.
ಮನವಿ ಆಲಿಸಿದ ತಹಸೀಲ್ದಾರ್‌ರವರು ತಕ್ಷಣ ಸ್ಥಳ ಪರಿಶೀಲನೆಗೆ ತೆರಳಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ನಡುವೆ ಕೋಳಿ ಪಾರಂ ಮಾಲೀಕರಿಗೆ ಶಾಸಕ ಬಿ.ಕೆ ಸಂಗಮೇಶ್ವರ್ ಸಹ ತೆರವುಗೊಳಿಸುವಂತೆ ಸೂಚಿಸಿದ್ದಾರೆ.
No comments:
Post a Comment