ವಿದ್ಯುತ್ ದರ ಏರಿಕೆ ಖಂಡಿಸಿ ಮಂಗಳವಾರ ಭದ್ರಾವತಿ ಉಂಬ್ಳೆಬೈಲು ರಸ್ತೆಯಲ್ಲಿರುವ ಮೆಸ್ಕಾಂ ಕಛೇರಿ ಮುಂಭಾಗ ಭಾರತೀಯ ಜನತಾ ಪಕ್ಷ ತಾಲೂಕು ಮಂಡಲ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಭದ್ರಾವತಿ, ಜೂ. ೧೩ : ವಿದ್ಯುತ್ ದರ ಏರಿಕೆ ಖಂಡಿಸಿ ಮಂಗಳವಾರ ನಗರದ ಉಂಬ್ಳೆಬೈಲು ರಸ್ತೆಯಲ್ಲಿರುವ ಮೆಸ್ಕಾಂ ಕಛೇರಿ ಮುಂಭಾಗ ಭಾರತೀಯ ಜನತಾ ಪಕ್ಷ ತಾಲೂಕು ಮಂಡಲ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಪಕ್ಷದ ಪ್ರಮುಖರು ಮಾತನಾಡಿ, ಗ್ಯಾರಂಟಿ ಯೋಜನೆ ಘೋಷಣೆಗಳೊಂದಿಗೆ ಪ್ರಸ್ತುತ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಒಂದೆಡೆ ಪ್ರತಿಯೊಬ್ಬರಿಗೂ ೨೦೦ ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವುದಾಗಿ ಘೋಷಿಸಿದೆ. ಮತ್ತೊಂದೆಡೆ ವಿದ್ಯುತ್ ದರ ಏರಿಕೆ ಮಾಡುವ ಮೂಲಕ ಜನರನ್ನು ಸಂಕಷ್ಟಕ್ಕೆ ತಳ್ಳಿದೆ. ತಕ್ಷಣ ವಿದ್ಯುತ್ ದರ ಇಳಿಕೆ ಮಾಡುವಂತೆ ಆಗ್ರಹಿಸಿದರು.
ಪಕ್ಷದ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ನೇತೃತ್ವ ವಹಿಸಿದ್ದರು. ಪ್ರಮುಖರಾದ ಎಂ. ಮಂಜುನಾಥ್, ಚನ್ನೇಶ್, ಕರೀಗೌಡ, ರಾಜಶೇಖರ್ ಉಪ್ಪಾರ, ರವಿಕುಮಾರ್, ಎಂ.ಎಸ್ ಸುರೇಶಪ್ಪ, ಬಿ.ಜಿ ಈಶ್ವರ್, ರಂಗಸ್ವಾಮಿ, ಮೂರ್ತಿ(ಆಟೋ), ಅನ್ನಪೂರ್ಣ, ಮಂಜುಳ, ನಾಗಮಣಿ, ರೇಖಾ ಪದ್ಮಾವತಿ ಸೇರಿದಂತೆ ಇನ್ನಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
No comments:
Post a Comment