ಭದ್ರಾವತಿಯಲ್ಲಿ ನಾಡಹಬ್ಬ ಜಯಂತ್ಯೋತ್ಸವದ ಅಂಗವಾಗಿ ಮಂಗಳವಾರ ತಾಲೂಕು ಒಕ್ಕಲಿಗರ ಸಂಘದ ನೇತೃತ್ವದಲ್ಲಿ ಒಕ್ಕಲಿಗ ಸಮುದಾಯದ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಮೆರವಣಿಗೆಗೆ ಜೆಡಿಎಸ್ ಮುಖಂಡರಾದ ಶಾರದ ಅಪ್ಪಾಜಿ ಚಾಲನೆ ನೀಡಿದರು.
ಭದ್ರಾವತಿ, ಭದ್ರಾವತಿ, ಜೂ. ೨೭: ನಗರದ ವಿವಿಧೆಡೆ ಮಂಗಳವಾರ ನಾಡಪ್ರಭು ಕೆಂಪೇಗೌಡ ಜಯಂತ್ಯೋತ್ಸವ ವಿಜೃಂಭಣೆಯಿಂದ ಆಚರಿಸಲಾಯಿತು.
ತಾಲೂಕು ಒಕ್ಕಲಿಗರ ಸಂಘದ ನೇತೃತ್ವದಲ್ಲಿ ಒಕ್ಕಲಿಗ ಸಮುದಾಯದ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಮೆರವಣಿಗೆಗೆ ಜೆಡಿಎಸ್ ಮುಖಂಡರಾದ ಶಾರದ ಅಪ್ಪಾಜಿ ಚಾಲನೆ ನೀಡಿದರು.
ನಗರದ ಬಿ.ಎಚ್ ರಸ್ತೆ, ಹುತ್ತಾ ಕಾಲೋನಿ ಬಸ್ ನಿಲ್ದಾಣದಿಂದ ವಿವಿಧ ಕಲಾತಂಡಗಳೊಂದಿಗೆ ಆರಂಭಗೊಂಡ ಮೆರವಣಿಗೆ ಕೆಎಸ್‌ಆರ್ ಟಿಸಿ ಮುಖ್ಯ ಬಸ್ ನಿಲ್ದಾಣ, ಡಾ. ಬಿ.ಆರ್ ಅಂಬೇಡ್ಕರ್ ವೃತ್ತ, ಹಾಲಪ್ಪ ವೃತ್ತ, ರಂಗಪ್ಪ ವೃತ್ತ ಮೂಲಕ ತಾಲೂಕು ಕಛೇರಿವರೆಗೂ ತಲುಪಿತು.
ಮೆರವಣಿಗೆಯಲ್ಲಿ ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಟಿ ರವಿ ಹಾಗೂ ಪದಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎಸ್. ಮಣಿಶೇಖರ್, ಒಕ್ಕಲಿಗ ಸಮುದಾಯದ ವಿವಿಧ ಸಂಘಟನೆಗಳ ಪ್ರಮುಖರು ಪಾಲ್ಗೊಂಡಿದ್ದರು.
ಆಟೋ ಚಾಲಕರು ಮತ್ತು ಸ್ನೇಹ ಜೀವಿ ಬಳಗದಿಂದ ಜಯಂತಿ ಆಚರಣೆ :
ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಮುಂಭಾಗ ಈ ಬಾರಿ ಸಹ ಸರ್.ಎಂ ವಿಶ್ವೇಶ್ವರಾಯ ಆಟೋ ಚಾಲಕರು, ಮಾಲೀಕರ ಸಂಘ ಹಾಗು ಸ್ನೇಹ ಜೀವಿ ಬಳಗದಿಂದ ನಾಡಪ್ರಭು ಕೆಂಪೇಗೌಡರ ಜಯಂತ್ಯೋತ್ಸವ ಆಚರಿಸಲಾಯಿತು.
ಶಾಸಕ ಬಿ.ಕೆ ಸಂಗಮೇಶ್ವರ್ ಸರ್.ಎಂ ವಿಶ್ವೇಶ್ವರಾಯ ಪ್ರತಿಮೆಗೆ ಹಾಗು ನಾಡಪ್ರಭು ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಒಕ್ಕಲಿಗ ಸಮಾಜದ ಮುಖಂಡ ಅರುಣ್‌ಗೌಡ ಸಾವಿರಾರು ಮಂದಿಗೆ ಮೈಸೂರು ಪ್ಯಾಕ್ ವಿತರಿಸಿದರು. ಅಲ್ಲದೆ ಸುಮಾರು ೩ ಸಾವಿರ ಮಂದಿಗೆ ಬಾಡೂಟದ ವ್ಯವಸ್ಥೆ ಕೈಗೊಳ್ಳಲಾಗಿತ್ತು.
ಭದ್ರಾವತಿ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಮುಂಭಾಗ ಈ ಬಾರಿ ಸಹ ಸರ್.ಎಂ ವಿಶ್ವೇಶ್ವರಾಯ ಆಟೋ ಚಾಲಕರು, ಮಾಲೀಕರ ಸಂಘ ಹಾಗು ಸ್ನೇಹ ಜೀವಿ ಬಳಗದಿಂದ ನಾಡಪ್ರಭು ಕೆಂಪೇಗೌಡರ ಜಯಂತ್ಯೋತ್ಸವ ಆಚರಿಸಲಾಯಿತು. ಶಾಸಕ ಬಿ.ಕೆ ಸಂಗಮೇಶ್ವರ್‌ಗೆ ಸಿಹಿ ತಿನಿಸುವ ಮೂಲಕ ಸಂಭ್ರಮಿಸಲಾಯಿತು.
ಪ್ರಮುಖರಾದ ಸ್ನೇಹ ಜೀವಿ ಬಳಗದ ಪೊಲೀಸ್ ಉಮೇಶ್, ಹ ಸರ್.ಎಂ ವಿಶ್ವೇಶ್ವರಾಯ ಆಟೋ ಚಾಲಕರು, ಮಾಲೀಕರ ಸಂಘದ ಅಧ್ಯಕ್ಷ ಲಕ್ಷ್ಮಣ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್, ನಗರಸಭಾ ಸದಸ್ಯ ಮಣಿ ಎಎನ್‌ಎಸ್, ಅರುಣ್‌ಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ತಾಲೂಕು ಕಛೇರಿಯಲ್ಲಿ ಕೆಂಪೇಗೌಡ ಜಯಂತಿ :
ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲೂಕು ಕಛೇರಿ ಸಭಾಂಗಣದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಿಸಲಾಯಿತು.
ಭದ್ರಾವತಿಯಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲೂಕು ಕಛೇರಿ ಸಭಾಂಗಣದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಿಸಲಾಯಿತು. ತಾಲೂಕು ಆಡಳಿತ ವತಿಯಿಂದ ಶಾಸಕ ಬಿ.ಕೆ ಸಂಗಮೇಶ್ವರನ್ನು ಅಭಿನಂದಿಸಲಾಯಿತು.
ಶಾಸಕರಾದ ಬಿ.ಕೆ ಸಂಗಮೇಶ್ವರ್ ಮತ್ತು ಶಾರದಪೂರ‍್ಯಾನಾಯ್ಕ ಕಾರ್ಯಕ್ರಮದಲ್ಲಿ ಒಟ್ಟಿಗೆ ಪಾಲ್ಗೊಂಡು ಗಮನ ಸೆಳೆದರು. ತಹಸೀಲ್ದಾರ್ ಸುರೇಶ್ ಆಚಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಟಿ ರವಿ, ಕಾರ್ಯದರ್ಶಿ ಪ್ರಭಾಕರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್, ನಗರಸಭಾ ಸದಸ್ಯ ಮಣಿ ಎಎನ್‌ಎಸ್ ಸೇರಿದಂತೆ ತಾಲೂಕು ಕಛೇರಿ ಅಧಿಕಾರಿಗಳು, ಸಿಬ್ಬಂದಿ ವರ್ಗದವರು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಪಾಲ್ಗೊಂಡಿದ್ದರು.
No comments:
Post a Comment