ಭದ್ರಾವತಿ ತಾಲೂಕಿನ ಅರಳಿಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೂಡ್ಲಿಗೆರೆ ಹರಿಹರೇಶ್ವರ ಪ್ರೌಢಶಾಲೆ ಮತ್ತು ನಾಗತಿಬೆಳಗಲು ಶ್ರೀ ನಂಜುಂಡೇಶ್ವರ ಪ್ರೌಢಶಾಲೆಯ ಮಕ್ಕಳಿಗೆ ಉಚಿತ ನೋಟ್ ಪುಸ್ತಕಗಳನ್ನು ಶ್ರೀ ವಿನಾಯಕ ಚಾರಿಟಬಲ್ ಟ್ರಸ್ಟ್ ವತಿಯಿಂದ ವಿತರಿಸಲಾಯಿತು.
ಭದ್ರಾವತಿ, ಜೂ. ೧೧ : ಮಕ್ಕಳು ಪೋಷಕರ ಶ್ರಮ ಅರ್ಥ ಮಾಡಿಕೊಳ್ಳಬೇಕು. ಅವರ ಶ್ರಮಕ್ಕೆ ಸಾರ್ಥಕತೆ ತಂದುಕೊಡುವ ನಿಟ್ಟಿನಲ್ಲಿ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಗಮನ ಹರಿಸಿ ಸಾಧನೆ ದಾರಿಯಲ್ಲಿ ಸಾಗಬೇಕೆಂದು ಸಮಾಜ ಸೇವಕ, ದಾನಿ, ಶ್ರೀ ವಿನಾಯಕ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಎ. ಧರ್ಮೇಂದ್ರ ಹೇಳಿದರು.
ಪ್ರತಿ ವರ್ಷದಂತೆ ಈ ಬಾರಿ ಸಹ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕಗಳನ್ನು ಶ್ರೀ ವಿನಾಯಕ ಚಾರಿಟಬಲ್ ಟ್ರಸ್ಟ್ ವತಿಯಿಂದ ವಿತರಿಸಿ ಮಾತನಾಡಿದರು. ಪ್ರತಿಯೊಬ್ಬರಿಗೂ ಶಿಕ್ಷಣ ಬಹಳ ಮುಖ್ಯವಾಗಿದೆ. ಬಡತನ ಕಲಿಕೆಗೆ ಅಡ್ಡಿಯಾಗಬಾರದು. ನಾವು ಅನುಭವಿಸಿದ ಕಷ್ಟಗಳು ಇಂದಿನ ಮಕ್ಕಳು ಎದುರಿಸಬಾರದು ಎಂಬ ಉದ್ದೇಶದೊಂದಿಗೆ ಉಚಿತ ನೋಟ್ ಪುಸ್ತಕಗಳನ್ನು ಹಲವಾರು ವರ್ಷಗಳಿಂದ ವಿತರಿಸಲಾಗುತ್ತಿದೆ. ಇದನ್ನು ಮಕ್ಕಳು ಅರ್ಥ ಮಾಡಿಕೊಂಡು ಕಲಿಕೆಗೆ ಹೆಚ್ಚಿನ ಆಸಕ್ತಿ ತೋರಬೇಕೆಂದರು.
ಅರಳಿಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೂಡ್ಲಿಗೆರೆ ಹರಿಹರೇಶ್ವರ ಪ್ರೌಢಶಾಲೆ ಮತ್ತು ನಾಗತಿಬೆಳಗಲು ಶ್ರೀ ನಂಜುಂಡೇಶ್ವರ ಪ್ರೌಢಶಾಲೆಯ ಮಕ್ಕಳಿಗೆ ಉಚಿತ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು.
ಶ್ರೀ ವಿನಾಯಕ ಚಾರಿಟಬಲ್ ಟ್ರಸ್ಟ್ ಸೇವಾ ಕಾರ್ಯ ಸ್ಮರಿಸಿ ಎ. ಧರ್ಮೇಂದ್ರ ದಂಪತಿಯನ್ನು ಸನ್ಮಾನಿಸಿ ಗೌರವಿಸಲಾಯಿತು. ಆಯಾ ಶಾಲೆಗಳ ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಸಿಬ್ಬಂದಿ ವರ್ಗದವರು, ಪೋಷಕರು ಉಪಸ್ಥಿತರಿದ್ದರು.
No comments:
Post a Comment