ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ೯ ವರ್ಷ ಆಡಳಿತ ಯಶಸ್ವಿಯಾಗಿ ಪೂರೈಸಿರುವ ಹಿನ್ನಲೆಯಲ್ಲಿ ತಾಲೂಕು ಬಿಜೆಪಿ ಮಂಡಲ ವತಿಯಿಂದ ಶುಕ್ರವಾರ ವಿಕಾಸ ತೀರ್ಥಯಾತ್ರೆ ಆಯೋಜಿಸಲಾಗಿತ್ತು. ಸಂಸದ ಬಿ.ವೈ ರಾಘವೇಂದ್ರ ನಗರದ ಬೈಪಾಸ್ ರಸ್ತೆ ಮಿಲ್ಟ್ರಿಕ್ಯಾಂಪ್ ೯೭ ಬಿ.ಎನ್ ಆರ್‌ಎಎಫ್ ಘಟಕ ಕಾಮಗಾರಿ ವೀಕ್ಷಿಸಿದರು.
ಭದ್ರಾವತಿ, ಜೂ. ೧೬: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ೯ ವರ್ಷ ಆಡಳಿತ ಯಶಸ್ವಿಯಾಗಿ ಪೂರೈಸಿರುವ ಹಿನ್ನಲೆಯಲ್ಲಿ ತಾಲೂಕು ಬಿಜೆಪಿ ಮಂಡಲ ವತಿಯಿಂದ ಶುಕ್ರವಾರ ವಿಕಾಸ ತೀರ್ಥಯಾತ್ರೆ ಆಯೋಜಿಸಲಾಗಿತ್ತು.
ಸಂಸದ ಬಿ.ವೈ ರಾಘವೇಂದ್ರ ನಗರದ ಬೈಪಾಸ್ ರಸ್ತೆ ಮಿಲ್ಟ್ರಿಕ್ಯಾಂಪ್ ೯೭ ಬಿ.ಎನ್ ಆರ್‌ಎಎಫ್ ಘಟಕ ಹಾಗು ಕಡದಕಟ್ಟೆ ಬಳಿ ನಿರ್ಮಾಣಗೊಳ್ಳುತ್ತಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿ ವೀಕ್ಷಣೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ರಾಘವೇಂದ್ರ, ಕೇಂದ್ರ ಸರ್ಕಾರ ಕಳೆದ ೯ ವರ್ಷಗಳ ಆಡಳಿತಾವಧಿಯಲ್ಲಿ ದೇಶಾದ್ಯಂತ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದೆ. ಜಿಲ್ಲೆಯಲ್ಲಿ ಸಾಕಷ್ಟು ಯೋಜನೆಗಳು ಪ್ರಗತಿಯಲ್ಲಿದ್ದು, ಭವಿಷ್ಯದಲ್ಲಿ ಇನ್ನಷ್ಟು ಉತ್ತಮ ಆಡಳಿತ ನೀಡುವ ಉದ್ದೇಶದಿಂದ ವಿಕಾಸ ತೀರ್ಥ ಯಾತ್ತೆ ಕೈಗೊಳ್ಳಲಾಗುತ್ತಿದೆ. ಭದ್ರಾವತಿ ತಾಲೂಕಿನಲ್ಲಿ ೯೭ ಬಿ.ಎನ್ ಆರ್‌ಎಎಫ್ ಘಟಕ ಹಾಗು ಕಡದಕಟ್ಟೆ ಬಳಿ ನಿರ್ಮಾಣಗೊಳ್ಳುತ್ತಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿ ಪ್ರಗತಿಯಲ್ಲಿವೆ. ಅಲ್ಲದೆ ಈಗಾಗಲೇ ಸಾಕಷ್ಟು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ ಎಂದರು.
ಬಿಜೆಪಿ ಮಂಡಲ ತಾಲೂಕು ಅಧ್ಯಕ್ಷ ಜಿ. ಧರ್ಮಪ್ರಸಾದ್, ಜಿಲ್ಲಾ ಸಂಪರ್ಕ ಸೆ ಸಮರ್ಥನ್ ಅಭಿಯಾನದ ಪ್ರಮುಖರಾದ ಅಶೋಕ್ ಮೂರ್ತಿ, ಡಾ. ಧನಂಜಯ ಸರ್ಜಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಕೆ ಶ್ರೀನಾಥ್, ಕಾರ್ಯದರ್ಶಿ ಎಂ. ಪ್ರಭಾಕರ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಹರಿಕೃಷ್ಣ, ಮುಖಂಡರಾದ ಮಂಗೋಟೆ ರುದ್ರೇಶ್, ರಂಗಸ್ವಾಮಿ, ಪ್ರಶಾಂತ್ ಪಂಡಿತ್, ದಿನೇಶ್ ಆಚಾರ್ಯ, ತೀರ್ಥಯ್ಯ, ಕೂಡ್ಲಿಗೆರೆ ಹಾಲೇಶ್, ಕೆ.ಎನ್ ಶ್ರೀಹರ್ಷ, ರಾಮಲಿಂಗಯ್ಯ, ಜಿ. ಆನಂದಕುಮಾರ್, ಮಲ್ಲೇಶ್, ವೇಲು, ಧರ್ಮಣ್ಣ, ಸತೀಶ್, ಕರೀಗೌಡ, ಉಮಾಪತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment