ಡಾ. ವಿಷ್ಣುವರ್ಧನ್
ಭದ್ರಾವತಿ, ಜು. 11: ಅಪೇಕ್ಷ ನೃತ್ಯ ಕಲಾವೃಂದದಿಂದ ಜು.16ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಾಯೋಜಕತ್ವದೊಂದಿಗೆ ಡಾ. ವಿಷ್ಣುವರ್ಧನ್ ಸಂಗೀತ ನೃತ್ಯ ಸಂಭ್ರಮ, ಡಾ. ವಿಷ್ಣುವರ್ಧನ್ ಪ್ರಶಸ್ತಿ ಹಾಗು ಅಪೇಕ್ಷ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಸಿದ್ದಾರೂಢನಗರದ ಬಸವೇಶ್ವರ ಸಭಾಭವನದಲ್ಲಿ ಅಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಸಮಾರಂಭ ಶಾಸಕ ಬಿ.ಕೆ ಸಂಗಮೇಶ್ವರ ಉದ್ಘಾಟಿಸಲಿದ್ದು, ಅಪೇಕ್ಷ ನೃತ್ಯ ಕಲಾವೃಂದದ ಅಧ್ಯಕ್ಷೆ ಭಾರತಿ ಗೋವಿಂದಸ್ವಾಮಿ ಅಧ್ಯಕ್ಷತೆವಹಿಸಲಿದ್ದಾರೆ. ಶಿವಮೊಗ್ಗ ಕರ್ನಾಟಕ ಸಂಘದ ಅಧ್ಯಕ್ಷ ಸುಂದರ್ ರಾಜ್ ಉಪನ್ಯಾಸ ನೀಡಲಿದ್ದಾರೆ.
ಅಪೇಕ್ಷ ನೃತ್ಯ ಕಲಾವೃಂದದಿಂದ ಕಾರ್ಯದರ್ಶಿ ಅಪೇಕ್ಷ ಮಂಜುನಾಥ್ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಲು ಕೋರಲಾಗಿದೆ.
No comments:
Post a Comment