ಭದ್ರಾವತಿ ನಗರಸಭೆ ವ್ಯಾಪ್ತಿಯಲ್ಲಿ ಪುನಃ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಈ ಹಿನ್ನಲೆಯಲ್ಲಿ ನಗರಸಭೆ ವತಿಯಿಂದ ಶುಕ್ರವಾರ ನಾಯಿಗಳ ಸಂತಾನಹರಣ ಶಸ್ತ್ರ ಚಿಕಿತ್ಸೆಗೆ ಚಾಲನೆ ನೀಡಲಾಯಿತು.
ಭದ್ರಾವತಿ, ಜು. ೧೪ : ನಗರಸಭೆ ವ್ಯಾಪ್ತಿಯಲ್ಲಿ ಪುನಃ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಈ ಹಿನ್ನಲೆಯಲ್ಲಿ ನಗರಸಭೆ ವತಿಯಿಂದ ಶುಕ್ರವಾರ ನಾಯಿಗಳ ಸಂತಾನಹರಣ ಶಸ್ತ್ರ ಚಿಕಿತ್ಸೆಗೆ ಚಾಲನೆ ನೀಡಲಾಯಿತು.
೩೫ ವಾರ್ಡ್‌ಗಳನ್ನು ಹೊಂದಿರುವ ನಗರಸಭೆಯ ಬಹುತೇಕ ವಾರ್ಡ್‌ಗಳಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಬೀದಿ ನಾಯಿಗಳನ್ನು ನಿಯಂತ್ರಿಸಲು ನಗರಸಭೆ ಸಾಕಷ್ಟು ಶ್ರಮಿಸುತ್ತಿದೆ. ಬೀದಿ ನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸೆಗೆ ಮೊರೆ ಹೋಗಿದ್ದು, ಪ್ರತಿ ವರ್ಷ ಸಂತಾನಹರಣ ಚಿಕಿತ್ಸೆ ನಡೆಸಲಾಗುತ್ತಿದೆ. ಆದರೂ ಸಹ ಬೀದಿ ನಾಯಿಗಳ ನಿಯಂತ್ರಣ ಸಾಧ್ಯವಾಗುತ್ತಿಲ್ಲ.
ನಗರಸಭೆ ವ್ಯಾಪ್ತಿಯಲ್ಲಿ ಸುಮಾರು ೫ ಸಾವಿರ ಬೀದಿಗಳಿದ್ದು, ಈ ಪೈಕಿ ಕಳೆದ ವರ್ಷ ಸುಮಾರು ೧ ಸಾವಿರ ಬೀದಿನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ನಡೆಸಲಾಗಿತ್ತು. ಈ ಬಾರಿ ಸುಮಾರು ೧,೫೦೦ ಬೀದಿನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ನಡೆಸಲು ಗುರಿ ಹೊಂದಲಾಗಿದೆ.
ಬೀದಿ ನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ನಡೆಸಲು ಗುತ್ತಿಗೆ ನೀಡಲಾಗಿದ್ದು, ಓರ್ವ ವೈದ್ಯರು ಪ್ರತಿ ದಿನ ಸುಮಾರು ೨೦ ರಿಂದ ೨೫ ಬೀದಿ ನಾಯಿಗಳಿಗೆ ಶಸ್ತ್ರಚಿಕಿತ್ಸೆ ಕೈಗೊಳ್ಳುತ್ತಿದ್ದಾರೆ. ಸುಮಾರು ೩ ತಿಂಗಳವರೆಗೆ ಸಂತಾನಹರಣ ಶಸ್ತ್ರಚಿಕಿತ್ಸೆ ನಡೆಯಲಿದೆ.
ನಗರಸಭೆ ಅಧ್ಯಕ್ಷೆ ಶೃತಿ ವಸಂತಕುಮಾರ್, ಉಪಾಧ್ಯಕ್ಷೆ ಸರ್ವಮಂಗಳ ಭೈರಪ್ಪ, ಪರಿಸರ ಅಭಿಯಂತರ ಪ್ರಭಾಕರ್, ಹಿರಿಯ ಆರೋಗ್ಯ ನಿರೀಕ್ಷಕ ಆರ್.ಬಿ ಸತೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment