ಭದ್ರಾವತಿ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ವಿಶೇಷವಾಗಿ ಆಯೋಜಿಸಲಾಗಿದ್ದ ಜನಪದ ಮತ್ತು ಸಾಂಸ್ಕೃತಿಕ ಹಬ್ಬ ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಎಂ ನಾಸಿರ್‌ಖಾನ್ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.
ಭದ್ರಾವತಿ, ಜು. ೧೫ : ನಗರದ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ವಿಶೇಷವಾಗಿ ಜನಪದ ಮತ್ತು ಸಾಂಸ್ಕೃತಿಕ ಹಬ್ಬ ಆಯೋಜಿಸಲಾಗಿತ್ತು.
ಕಾಲೇಜಿನ ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಸಾಂಪ್ರಾದಾಯಿಕ ಮತ್ತು ಜನಪದ ಉಡುಗೆ ತೊಡುಗೆಗಳೊಂದಿಗೆ ಕಂಗೊಳಿಸಿದರು.
ವಿದ್ಯಾರ್ಥಿಗಳು ತಾವೇ ತಯಾರಿಸಿದ ರುಚಿಶುಚಿಯಾದ ಮನೆ ಅಡುಗೆ ಪದಾರ್ಥಗಳನ್ನು ಮಳಿಗೆಗಳನ್ನು ನಿರ್ಮಿಸಿ ಮಾರಾಟದಲ್ಲಿ ತೊಡಗಿರುವುದು ಹಾಗು ತಾವೇ ರೂಪಿಸಿದ ಜನಪದ ನೃತ್ಯಗಳು ಮತ್ತು ಹಾಡುಗಳನ್ನು ಹಾಡಿ ಸಂಭ್ರಮಾಚರಣೆಯಲ್ಲಿ ತೊಡಗಿರುವುದು ವಿಶೇಷವಾಗಿ ಕಂಡು ಬಂದಿತು.
ಪ್ರಾಂಶುಪಾಲ ಡಾ. ಬಿ.ಎಂ ನಾಸಿರ್‌ಖಾನ್, ಕಾಲೇಜಿನ ಸಾಂಸ್ಕೃತಿಕ ವೇದಿಕೆ ಸಂಚಾಲಕ ಎನ್. ರವಿ ಸೇರಿದಂತೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಹಲವು ವರ್ಷಗಳ ನಂತರ ಜನಪದ ಮತ್ತು ಸಾಂಸ್ಕೃತಿಕ ಹಬ್ಬ ಆಚರಿಸುವ ಮೂಲಕ ಕಾಲೇಜು ಎಲ್ಲರ ಗಮನ ಸೆಳೆದಿರುವುದು ವಿಶೇಷವಾಗಿದೆ.
ಭದ್ರಾವತಿ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ವಿಶೇಷವಾಗಿ ಆಯೋಜಿಸಲಾಗಿದ್ದ ಜನಪದ ಮತ್ತು ಸಾಂಸ್ಕೃತಿಕ ಹಬ್ಬದಲ್ಲಿ ವಿದ್ಯಾರ್ಥಿಗಳು ತಾವೇ ತಯಾರಿಸಿದ ರುಚಿಶುಚಿಯಾದ ಮನೆ ಅಡುಗೆ ಪದಾರ್ಥಗಳನ್ನು ಮಳಿಗೆಗಳನ್ನು ನಿರ್ಮಿಸಿ ಮಾರಾಟದಲ್ಲಿ ತೊಡಗಿರುವುದು ಕಂಡು ಬಂದಿತು.
No comments:
Post a Comment