ಭದ್ರಾವತಿ ನ್ಯೂಟೌನ್ ಜೆಟಿಎಸ್ಶಾಲೆ ಸಮೀಪದ ಲಯನ್ಸ್ಕಣ್ಣಿನ ಆಸ್ಪತ್ರೆ ಸಭಾ ಭವನದಲ್ಲಿ ಭಾನುವಾರ ಕರ್ನಾಟಕ ದಲಿತ ನೌಕರರ ಒಕ್ಕೂಟದ ತಾಲೂಕು ಶಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರೊ. ಬಿ. ಕೃಷ್ಣಪ್ಪನವರ ೮೬ನೇ ಜನ್ಮದಿನಾಚರಣೆ ದಲಿತ ಸಂಘರ್ಷ ಸಮಿತಿ ರಾಜ್ಯ ಖಜಾಂಚಿ ಸತ್ಯ ಭದ್ರಾವತಿ ಉದ್ಘಾಟಿಸಿದರು.
ಅವರು ಭಾನುವಾರ ನ್ಯೂಟೌನ್ ಜೆಟಿಎಸ್ಶಾಲೆ ಸಮೀಪದ ಲಯನ್ಸ್ಕಣ್ಣಿನ ಆಸ್ಪತ್ರೆ ಸಭಾ ಭವನದಲ್ಲಿ ಕರ್ನಾಟಕ ದಲಿತ ನೌಕರರ ಒಕ್ಕೂಟದ ತಾಲೂಕು ಶಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರೊ. ಬಿ. ಕೃಷ್ಣಪ್ಪನವರ ೮೬ನೇ ಜನ್ಮದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ವಿಶ್ವಜ್ಞಾನಿ, ಭಾರತರತ್ನ ಬಾಬಾ ಸಾಹೇಬ್ಅಂಬೇಡ್ಕರ್ರವರ ದಾರಿಯಲ್ಲಿ ಸಾಗಿಬಂದ ಪ್ರೊ. ಬಿ. ಕೃಷ್ಣಪ್ಪನವರು ರಾಜ್ಯದಲ್ಲಿ ದಲಿತರ ಮೇಲಿನ ದೌರ್ಜನ್ಯಗಳ ವಿರುದ್ಧ ೧೯೭೫ರ ಅವಧಿಯಲ್ಲಿ ದಲಿತ ಸಂಘಟನೆ ಮೂಲಕ ಚಳುವಳಿಗಳನ್ನು ಆರಂಭಿಸಿ ನ್ಯಾಯ ಒದಗಿಸಿಕೊಡುವಲ್ಲಿ ಯಶಸ್ವಿಯಾದರು. ಹಲವಾರು ಪ್ರಮುಖ ಹೋರಾಟಗಳಲ್ಲಿ ಪ್ರೊ. ಬಿ. ಕೃಷ್ಣಪ್ಪನವರು ಮುಂಚೂಣಿ ನಾಯಾಕರಾಗಿದ್ದರು. ಅವರ ಹೋರಾಟ ನಮ್ಮೆಲ್ಲರಿಗೂ ಮಾದರಿಯಾಗಿದ್ದು, ಆ ದಾರಿಯಲ್ಲಿ ನಾವುಗಳು ಸಹ ಸಾಗಬೇಕಾಗಿದೆ ಎಂದರು.
ಒಕ್ಕೂಟದ ಅಧ್ಯಕ್ಷೆ ಎಸ್. ಉಮಾ ಅಧ್ಯಕ್ಷತೆ ವಹಿಸಿದ್ದರು. ಗೌರವ ಸಲಹೆಗಾರ ಸಿ. ಜಯಪ್ಪ ಹೆಬ್ಬಳಗೆರೆ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶಿವಮೊಗ್ಗ ಇತಿಹಾಸ ತಜ್ಞ, ಚಿಂತಕ ಡಾ. ಕೆ.ಜಿ ವೆಂಕಟೇಶ್ಉಪನ್ಯಾಸ ನಡೆಸಿ ಕೊಟ್ಟರು.
ಹಿರಿಯ ರೈತ ಮುಖಂಡ ಎಚ್.ಆರ್ಬಸವರಾಜಪ್ಪ, ಬೆಂಗಳೂರು ಗಾಂಧಿಭವನ ಪ್ರೊ. ಬಿ. ಕೃಷ್ಣಪ್ಪ ಟ್ರಸ್ಟ್ಕಾರ್ಯದರ್ಶಿ, ಮ್ಯಾನೆಜಿಂಗ್ಟ್ರಸ್ಟಿ ಇಂದಿರಾ ಪ್ರೊ. ಕೃಷ್ಣಪ್ಪ, ಹಿರಿಯ ಸಾಹಿತಿ ಜಿ.ವಿ ಸಂಗಮೇಶ್ವರ್, ನಿವೃತ್ತ ಉಪನ್ಯಾಸಕ ಪ್ರೊ. ಎಂ. ಚಂದ್ರಶೇಖರಯ್ಯ, ನಗರಸಭೆ ಪ್ರಭಾರ ಅಧ್ಯಕ್ಷೆ ಬಿ.ಪಿ ಸರ್ವಮಂಗಳ ಭೈರಪ್ಪ, ಮಾಜಿ ಅಧ್ಯಕ್ಷ ಬಿ.ಕೆ ಮೋಹನ್, ಪೌರಾಯುಕ್ತ ಎಚ್.ಎಂ ಮನುಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಎನ್. ಗೋಪಾಲಪ್ಪ, ಒಕ್ಕೂಟದ ಪ್ರಭಾರ ಜಿಲ್ಲಾಧ್ಯಕ್ಷ ಸಿ.ಕೆ ಗಂಗಾಧರಮೂರ್ತಿ, ಡಿಎಸ್ಎಸ್ಜಿಲ್ಲಾ ಸಂಚಾಲಕ ಚಿನ್ನಯ್ಯ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಟಿ. ಪೃಥ್ವಿರಾಜ್, ತಾಲೂಕು ಸರ್ಕಾರಿ ಆಸ್ಪತ್ರೆ ವೈದ್ಯೆ ಡಾ. ವರ್ಷ, ದಲಿತ ಸಂಘರ್ಷ ಸಮಿತಿ ತಾಲೂಕು ಸಂಚಾಲಕ ರಂಗನಾಥ್ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಒಕ್ಕೂಟದ ಉಪಾಧ್ಯಕ್ಷ ಲೋಕೇಶ್(ಮೆಸ್ಕಾಂ) ಸ್ವಾಗತಿಸಿದರು. ಗೌರವಾಧ್ಯಕ್ಷ ಎಂ. ಈಶ್ವರಪ್ಪ(ನಗರಸಭೆ) ನಿರೂಪಿಸಿದರು. ಒಕ್ಕೂಟದ ಮಾರ್ಗದರ್ಶಕ ಕೆ.ಬಿ ಜುಂಜಾನಾಯ್ಕ್, ಸಂಘಟನಾ ಕಾರ್ಯದರ್ಶಿ ಕೆ. ರಂಗನಾಥ್ಹಾಗು ವಿವಿಧ ಸಂಘಟನೆಗಳ ಪ್ರಮುಖರು, ದಲಿತ ನೌಕರರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment