ಭದ್ರಾವತಿ, ಜು. ೧೭ : ಅನಿಶ್ಚಿತ ಕೃಷಿಯಲ್ಲಿ ನಿಶ್ಚಿತ ಆದಾಯ ತರುವ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿಯಾಗಿ ಅಗ್ರಿಕಲ್ಟರ್ ಇನ್‌ಶೂರೆನ್ಸ್ ಕಂಪನಿಯ ಸಹಯೋಗದೊಂದಿಗೆ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ಹೋಬಳಿ ಮತ್ತು ಗ್ರಾಮ ಪಂಚಾಯತಿ ಮಟ್ಟದಲ್ಲಿ ವಿವಿಧ ಬೆಳೆಗಳಿಗೆ ಕರ್ನಾಟಕ ರೈತ ಸುರಕ್ಷಾ ಫಸಲ್ ಭಿಮಾ ಯೋಜನೆ ಅನುಷ್ಠಾನಗೊಳಿಸಲು ಅಧಿಸೂಚನೆ ಹೊರಡಿಸಲಾಗಿದ್ದು, ರೈತರು ಸದುಪಯೋಗಪಡಿಸಿಕೊಳ್ಳಲು ಸಹಾಯಕ ಕೃಷಿ ನಿರ್ದೇಶಕರು ಕೋರಿದ್ದಾರೆ.
ಹೋಬಳಿ ಮಟ್ಟದಲ್ಲಿ ರಾಗಿ (ಮಳೆ ಆಶ್ರಿತ ), ಗ್ರಾಮ ಪಂಚಾಯತಿ ಮಟ್ಟದಲ್ಲಿ ಭತ್ತ (ನೀರಾವರಿ) ಮತ್ತು ಮುಸುಕಿನ ಜೋಳ (ಮಳೆ ಆಶ್ರಿತ) ಈ ಯೋಜನೆ ವ್ಯಾಪ್ತಿಯಲ್ಲಿ ಬರಲಿವೆ. ಪ್ರತಿ ಹೆಕ್ಟೇರ್ ಗೆ ವಿಮಾ ಮೊತ್ತ, ರೈತರು ಪಾವತಿಸಬೇಕಾದ ವಿಮಾ ಮೊತ್ತ ಮತ್ತು ಬೆಳೆ ವಿಮೆಗೆ ನೋಂದಾಯಿಸಲು ಅಂತಿಮ ದಿನಾಂಕ ಹಾಗೂ ಹೆಚ್ಚಿನ ಮಾಹಿತಿಗೆ ಸಮೀಪದ ರೈತ ಸಂಪರ್ಕ ಕೇಂದ್ರ/ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸಂಪರ್ಕಿಸಬಹುದಾಗಿದೆ.
No comments:
Post a Comment