ಡಾ. ವಿಜಯದೇವಿ
ಭದ್ರಾವತಿ, ಜು. ೧೯ : ನಗರದ ನಿವಾಸಿ, ವಿಜಯಪುರ ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವ ವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕಿ, ಎಮೆರಿಟಸ್ ಪ್ರೊಫೆಸರ್ ಡಾ. ವಿಜಯದೇವಿ ಅವರ ಅಲ್ಲಮ ಪ್ರಭುದೇವರು : ಚರಿತ್ರೆ, ಸಂಸ್ಕೃತಿ, ಜ್ಞಾನದ ಶೋಧಗಳು ಕೃತಿಗೆ ಕಲೇಸಂ ದತ್ತಿನಿಧಿ ಪ್ರಶಸ್ತಿ ಲಭಿಸಿದೆ.
ಬೆಂಗಳೂರಿನ ಕರ್ನಾಟಕ ಲೇಖಕಿಯರ ಸಂಘದ ವತಿಯಿಂದ ನೀಡಲಾಗುವ ೨೦೨೧ನೇ ಸಾಲಿನ ಶ್ರೀಮತಿ ಜಯಮ್ಮ ಕರಿಯಣ್ಣ(ಸಂಶೋಧನೆ) ದತ್ತಿನಿಧಿ ಪ್ರಶಸ್ತಿಗೆ ಅಲ್ಲಮ ಪ್ರಭುದೇವರು : ಚರಿತ್ರೆ, ಸಂಸ್ಕೃತಿ, ಜ್ಞಾನದ ಶೋಧಗಳು ಕೃತಿ ಆಯ್ಕೆಯಾಗಿದೆ.
ಜು.೨೩ರಂದು ಬೆಂಗಳೂರಿನ ಜೆ.ಸಿ ರಸ್ತೆ, ನಯನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿರುವ ೪೪ನೇ ವರ್ಷದ ಕರ್ನಾಟಕ ಲೇಖಕಿಯರ ಸಂಘದ ವಾರ್ಷಿಕೋತ್ಸವ, ವಿವಿಧ ಪ್ರಕಾರಗಳ ಕೃತಿ/ಸಾಧಕರ ಹೆಸರಿನ ದತ್ತಿಗಳ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಡಾ. ವಿಜಯದೇವಿ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ.
No comments:
Post a Comment