ಶಾಸಕ ಬಿ.ಕೆ ಸಂಗಮೇಶ್ವರ್ ಆಹ್ವಾನಿಸಿದ ಹಿರಿಯ ಚಲನಚಿತ್ರ ನಟ ದೊಡ್ಡಣ್ಣ
ಭದ್ರಾವತಿ, ಜು. ೧೮: ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ನಿವೃತ್ತ ನೌಕರ, ಹಿರಿಯ ಚಲನಚಿತ್ರ ನಟ ದೊಡ್ಡಣ್ಣ ಅವರ ನೇತೃತ್ವದಲ್ಲಿ ವಿಐಎಸ್‌ಎಲ್ ಶತಮಾನೋತ್ಸವ ಸಂಭ್ರಮಾಚರಣೆಗೆ ಸಿದ್ದತೆಗಳು ನಡೆಯುತ್ತಿವೆ. ಈ ನಡುವೆ ದೊಡ್ಡಣ್ಣ ಸಂಭ್ರಮಾಚರಣೆಗೆ ಗಣ್ಯರನ್ನು ಭೇಟಿಯಾಗಿ ಆಹ್ವಾನಿಸುತ್ತಿದ್ದು, ಕಳೆದ ೨ ದಿನಗಳ ಹಿಂದೆ ಬೆಂಗಳೂರಿನ ನಿವಾಸದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರನ್ನು ಭೇಟಿಯಾಗಿ ಆಹ್ವಾನಿಸಿದ್ದಾರೆ.
ಕೇಂದ್ರ ಉಕ್ಕು ಪ್ರಾಧಿಕಾರ ಸುಮಾರು ೭ ತಿಂಗಳ ಹಿಂದೆ ವಿಐಎಸ್‌ಎಲ್ ಕಾರ್ಖಾನೆ ಮುಚ್ಚುವ ತೀರ್ಮಾನ ಕೈಗೊಂಡು ಆದೇಶಿಸಿದ್ದು, ಇದರ ವಿರುದ್ಧ ಕಾರ್ಖಾನೆ ಮುಂಭಾಗ ಗುತ್ತಿಗೆ ಕಾರ್ಮಿಕರು ನಿರಂತರವಾಗಿ ಹೋರಾಟ ನಡೆಸುತ್ತಿದ್ದು, ವಿವಿಧ ರೀತಿಯ ಹೋರಾಟಗಳು ನಡೆದಿವೆ. ಬಹಿರಂಗಸಭೆ, ಪ್ರಧಾನ ಮಂತ್ರಿ, ಮುಖ್ಯಮಂತ್ರಿ ಹಾಗು ಕೇಂದ್ರ ಮತ್ತು ರಾಜ್ಯ ಸಚಿವರುಗಳಿಗೆ, ಸಂಸದರು, ಮಠಾಧೀಶರಿಗೆ ಮನವಿ ಸಲ್ಲಿಸಲಾಗಿದೆ. ಆದರೆ ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ. ಈ ಹಿನ್ನಲೆಯಲ್ಲಿ ಕಾರ್ಖಾನೆ ನಿವೃತ್ತ ನೌಕರ, ಹಿರಿಯ ಚಲನಚಿತ್ರ ನಟ ದೊಡ್ಡಣ್ಣ ಇದೀಗ ಕಾರ್ಖಾನೆ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮತ್ತೊಂದು ರೀತಿಯ ಹೋರಾಟಕ್ಕೆ ಮುಂದಾಗಿದ್ದಾರೆ.
ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ನಿವೃತ್ತ ನೌಕರ, ಹಿರಿಯ ಚಲನಚಿತ್ರ ನಟ ದೊಡ್ಡಣ್ಣ ಅವರ ನೇತೃತ್ವದಲ್ಲಿ ವಿಐಎಸ್‌ಎಲ್ ಶತಮಾನೋತ್ಸವ ಸಂಭ್ರಮಾಚರಣೆಗೆ ಸಿದ್ದತೆಗಳು ನಡೆಯುತ್ತಿವೆ. ಈ ನಡುವೆ ದೊಡ್ಡಣ್ಣ ಸಂಭ್ರಮಾಚರಣೆಗೆ ಗಣ್ಯರನ್ನು ಭೇಟಿಯಾಗಿ ಆಹ್ವಾನಿಸುತ್ತಿದ್ದು, ಕಳೆದ ೨ ದಿನಗಳ ಹಿಂದೆ ಬೆಂಗಳೂರಿನ ನಿವಾಸದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರನ್ನು ಭೇಟಿಯಾಗಿ ಆಹ್ವಾನಿಸಿದ್ದಾರೆ.
ಕೇಂದ್ರ ಹಾಗು ರಾಜ್ಯ ಸರ್ಕಾರಗಳ ಗಮನ ಸೆಳೆಯಲು ಕಾರ್ಖಾನೆಯ ಶತಮಾನೋತ್ಸವ ಸಂಭ್ರಮಾಚರಣೆ ಅದ್ದೂರಿಯಾಗಿ ಆಚರಿಸಲು ಮುಂದಾಗಿದ್ದಾರೆ. ಈಗಾಗಲೇ ಈ ಸಂಬಂಧ ಸಮಿತಿ ಸಹ ರಚನೆಯಾಗಿದ್ದು, ಸಂಭ್ರಮಾಚರಣೆಗೆ ದಿನಾಂಕ ಸಹ ನಿಗದಿಯಾಗಿದೆ. ಸಮಿತಿ ಗೌರವಾಧ್ಯಕ್ಷರಾಗಿ ಶಾಸಕ ಬಿ.ಕೆ ಸಂಗಮೇಶ್ವರ್ ಹಾಗು ಅಧ್ಯಕ್ಷರಾಗಿ ದೊಡ್ಡಣ್ಣ ಅವರನ್ನು ಆಯ್ಕೆ ಮಾಡಲಾಗಿದೆ.
ಸಂಭ್ರಮಾಚರಣೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರ ಸಚಿವರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ರಾಜ್ಯ ಸಚಿವರು ಹಾಗು ವಿವಿಧ ಕ್ಷೇತ್ರಗಳ ಗಣ್ಯರು, ಹೋರಾಟಗಾರರು, ಉದ್ಯಮಿಗಳು ಸೇರಿದಂತೆ ಇನ್ನಿತರರನ್ನು ಆಹ್ವಾನಿಸಲಾಗುತ್ತಿದೆ.
ದೊಡ್ಡಣ್ಣ ಸಮಿತಿ ಗೌರವಾಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರನ್ನು ಬೆಂಗಳೂರಿನ ನಿವಾಸದಲ್ಲಿ ಭೇಟಿಯಾಗಿ ಆಹ್ವಾನಿಸಿದ್ದಾರೆ.
No comments:
Post a Comment