ಭದ್ರಾವತಿ, ಜು. ೨೮: ನ್ಯೂಕಾಲೋನಿ ತರುಣ ಭಾರತಿ ವಿದ್ಯಾಕೇಂದ್ರದ ವತಿಯಿಂದ ಕೇಶವಪುರ ಬಡಾವಣೆಯಲ್ಲಿರುವ ತರುಣ ಭಾರತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜು.೨೯ರಂದು ೧೨.೧೫ಕ್ಕೆ ʻಭಾರತ ದರ್ಶನʼ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮತ್ತೂರಿನ ಸಾಮಾಜಿಕ ಕಾರ್ಯಕರ್ತ ಟಿ.ಎನ್ ಸ್ವಾಮಿ ಉಪನ್ಯಾಸ ನೀಡಲಿದ್ದು, ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ.
No comments:
Post a Comment