ಹಳೇದ್ವೇಷದ ಹಿನ್ನಲೆಯಲ್ಲಿ ಹತ್ಯೆ
ಭದ್ರಾವತಿ ನಗರಸಭೆ ವ್ಯಾಪ್ತಿಯ ಬೊಮ್ಮನಕಟ್ಟೆಯಲ್ಲಿ ಇತ್ತೀಚೆಗೆ ಭೀಕರವಾಗಿ ಹತ್ಯೆಯಾದ ರೌಡಿ ಶೀಟರ್ ಮೊಹಮದ್ ಮುಜಾಯಿದ್ದೀನ್ ಅಲಿಯಾಸ್ ಮುಜ್ಜು (೩೨) ಪ್ರಕರಣಕ್ಕೆ ಸಂಬಂಧಿಸಿದಂತೆ ಪೇಪರ್ ಟೌನ್ ಪೊಲೀಸರು ೫ ಮಂದಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಭದ್ರಾವತಿ : ನಗರಸಭೆ ವ್ಯಾಪ್ತಿಯ ಬೊಮ್ಮನಕಟ್ಟೆಯಲ್ಲಿ ಇತ್ತೀಚೆಗೆ ಭೀಕರವಾಗಿ ಹತ್ಯೆಯಾದ ರೌಡಿ ಶೀಟರ್ ಮೊಹಮದ್ ಮುಜಾಯಿದ್ದೀನ್ ಅಲಿಯಾಸ್ ಮುಜ್ಜು (೩೨) ಪ್ರಕರಣಕ್ಕೆ ಸಂಬಂಧಿಸಿದಂತೆ ಪೇಪರ್ ಟೌನ್ ಪೊಲೀಸರು ೫ ಮಂದಿ ಬಂಧಿಸಿದ್ದು, ವಿಚಾರಣೆ ವೇಳೆ ಹಳೇದ್ವೇಷದ ಹಿನ್ನಲೆಯಲ್ಲಿ ಹತ್ಯೆ ಮಾಡಿರುವುದು ತಿಳಿದು ಬಂದಿದೆ.
ಹತ್ಯೆಗೆ ಸಂಬಂಧಿಸಿದಂತೆ ಮೃತನ ಸಹೋದರ ನೀಡಿದ ದೂರಿನ ಮೇರೆಗೆ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಗ್ರಾಮಾಂತರ ಠಾಣೆ ಪೊಲೀಸ್ ನಿರೀಕ್ಷಕ ಗುರುರಾಜ ಮೈಲಾರ್ (ಪೇಪರ್ ಟೌನ್ ಪೊಲೀಸ್ ಠಾಣೆ ಪ್ರಭಾರ) ಮತ್ತು ನಗರ ವೃತ್ತ ಪೊಲೀಸ್ ನಿರೀಕ್ಷಕ ರಾಘವೇಂದ್ರ ಕಾಂಡಿಕೆ ನೇತೃತ್ವದಲ್ಲಿ, ಪೇಪರ್ ಟೌನ್ ಪೊಲೀಸ್ ಠಾಣೆ ಉಪ ನಿರೀಕ್ಷಕಿ ಕವಿತಾ, ಸಹಾಯಕ ನಿರೀಕ್ಷಕ ರತ್ನಾಕರ್ ಮತ್ತು ಸಿಬ್ಬಂದಿಗಳಾದ ವೆಂಕಟೇಶ, ವಾಸುದೇವ, ಅರುಣ, ನಾಗರಾಜ, ಎಂ. ಚಿನ್ನಾನಾಯ, ಚನ್ನಕೇಶವ, ಹಾಲಪ್ಪ, ಮಂಜುನಾಥ್, ಹಣಮಂತ ಅವಟಿ, ಆದರ್ಶ ಶೆಟ್ಟಿ, ವಿಕ್ರಮ್, ಶಿವಪ್ಪ, ಮಂಜುನಾಥ ಮಳೆ, ಮೌನೇಶ, ಈರಯ್ಯ ಮತ್ತು ಜಿಲ್ಲಾ ಪೊಲೀಸ್ ಕಛೇರಿಯ ತಾಂತ್ರಿಕ ಸಿಬ್ಬಂದಿಗಳಾದ ಇಂದ್ರೇಶ್, ಗುರುರಾಜ್, ವಿಜಯ್ ಕುಮಾರ್ ರವರುಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು
ತನಿಖಾ ತಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯೂರಿನ ಸಂತೋಷ ಕುಮಾರ್ ಅಲಿಯಾಸ್ ಗುಂಡ ಅಲಿಯಾಸ್ ಕರಿಯಾ (೩೩), ಹೊಸಮನೆ ಸುರೇಂದ್ರ ಅಲಿಯಾಸ್ ಆಟೋ ಸೂರಿ (೩೬), ಮಂಜುನಾಥ ಅಲಿಯಾಸ್ ಬಿಡ್ಡಾ(೩೩), ಭೂತನಗುಡಿ ವಿಜಯ್ ಕುಮಾರ್ ಅಲಿಯಾಸ್ ಪವರ್ (೨೫) ಮತ್ತು ಬಾರಂದೂರು ಹಳ್ಳಿಕೆರೆಯ ವೆಂಕಟೇಶ ಅಲಿಯಾಸ್ ಲೂಸ್ (೨೩) ರನ್ನು ಬಂಧಿಸಿದ್ದಾರೆ.
ಬಂಧಿತರನ್ನು ವಿಚಾರಣೆ ಮಾಡಲಾಗಿ ಹತ್ಯೆಯಾದ ಮೊಹಮದ್ ಮುಜಾಯಿದ್ದೀನ್ ಅಲಿಯಾಸ್ ಮುಜ್ಜು 2019ನೇ ಸಾಲಿನಲ್ಲಿ ರಮೇಶ ಎಂಬುವರನ್ನು ಕೊಲೆಮಾಡಿ ಮೇಲ್ಕಂಡ ಆರೋಪಿತರಾದ ಸಂತೋಷ್ ಮತ್ತು ಸುರೇಂದ್ರ ಇವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುತ್ತಾನೆ. ಈ ಹಳೆ ದ್ವೇಷದ ಹಿನ್ನೆಲೆಯಲ್ಲಿ ಆರೋಪಿತರು ಮುಜ್ಜುನನ್ನು ಕೊಲೆ ಮಾಡಿರುವುದು ತಿಳಿದು ಬಂದಿದೆ ಎನ್ನಲಾಗಿದೆ. ತನಿಖಾ ತಂಡದ ಕಾರ್ಯಕ್ಕೆ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ ಮಿಥುನ್ ಕುಮಾರ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
No comments:
Post a Comment