ಎಂ. ಸಿಂಚನ
ಭದ್ರಾವತಿ, ಜು. ೩ : ನಗರದ ಗಾಂಧಿನಗರದ ನಿವಾಸಿ ಕಾರೇಹಳ್ಳಿ ಶ್ರೀ ಬಾಲಗಂಗಾಧರನಾಥ ಕೇಂದ್ರೀಯ ವಿದ್ಯಾಲಯ(ಬಿಜಿಎಸ್)ದ ಶಿಕ್ಷಕಿ ಜಿ.ಎಸ್‌ಅನ್ನಪೂರ್ಣ ಹಾಗು ಗ್ರೀನ್‌ಲ್ಯಾಂಡ್‌ಹೋಟೆಲ್‌ಮಾಲೀಕ ಎಂ.ಎಸ್‌ಮಂಜುನಾಥ್‌ದಂಪತಿ ಪುತ್ರಿ ಎಂ. ಸಿಂಚನ ವಿಶ್ವವಿದ್ಯಾಲಯ ಮಟ್ಟದ ಅತ್ಯುತ್ತಮ ಎನ್‌ಎಸ್‌ಎಸ್‌ಸ್ವಯಂ ಸೇವಕಿ ಪ್ರಶಸ್ತಿ ಪಡೆದುಕೊಂಡಿದ್ದಾರೆ.
ಎಂ. ಸಿಂಚನ ಸಾಗರ ಇಂದಿರಾಗಾಂಧಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಅಂತಿಮ ವರ್ಷದ ಬಿಎಸ್‌ಸಿ ವಿದ್ಯಾರ್ಥಿನಿಯಾಗಿದ್ದು, ಸ್ವಯಂ ಸೇವಕಿ ಪ್ರಶಸ್ತಿ ಪಡೆದುಕೊಳ್ಳುವ ಮೂಲಕ ಗಮನ ಸೆಳೆದಿದ್ದಾರೆ.
ಕುವೆಂಪು ವಿಶ್ವವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಸ್ವಯಂ ಸೇವಕರು ಹಾಗು ಅಧಿಕಾರಿಗಳನ್ನು ಪ್ರೋತ್ಸಾಹಿಸಲು ಈ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಜು.೬ರಂದು ಬೆಳಿಗ್ಗೆ ೧೦.೩೦ಕ್ಕೆ ಕುವೆಂಪು ವಿಶ್ವ ವಿದ್ಯಾಲಯದ ಪ್ರೊ. ಎಸ್.ಪಿ ಹಿರೇಮಠ್‌ಸಭಾಂಗಣದಲ್ಲಿ ಪ್ರಶಸ್ತಿ ಪ್ರಧಾನ ನಡೆಯಲಿದೆ.
ಎಂ. ಸಿಂಚನ ಅವರಿಗೆ ಪ್ರಶಸ್ತಿ ಲಭಿಸಿರುವುದಕ್ಕೆ ಕುಟಂಬ ವರ್ಗದವರು ಸಂತಸ ವ್ಯಕ್ತಪಡಿಸಿದ್ದು, ಅಲ್ಲದೆ ನಗರದ ಅನೇಕ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.
No comments:
Post a Comment