ಭದ್ರಾವತಿಯಲ್ಲಿ ಸಾಲಬಾಧೆಯಿಂದ ಮಧು-ಮೋನಿಕಾ ದಂಪತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಭದ್ರಾವತಿ, ಜು. ೧೩ : ಸಾಲಬಾಧೆಯಿಂದ ದಂಪತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಬೆಳಕಿಗೆ ಬಂದಿದೆ.
ಮಧು(೨೭) ಮತ್ತು ಮೋನಿಕಾ(೨೧) ಆತ್ಮಹತ್ಯೆ ಮಾಡಿಕೊಂಡಿದ್ದು, ಇಬ್ಬರು ಗಾರೆ ಕೆಲಸ ಮಾಡಿಕೊಂಡಿಕೊಂಡು ಜೀವನ ನಿರ್ವಹಿಸುತ್ತಿದ್ದರು. ಬೈತುಂಬ ಸಾಲ ಮಾಡಿಕೊಂಡಿದ್ದು, ಸಾಲಬಾಧೆ ಹೆಚ್ಚಾದ ಹಿನ್ನಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಇಬ್ಬರು ಮನೆಯಿಂದ ಹೊರಬಾರದ ಹಿನ್ನಲೆಯಲ್ಲಿ ಅಕ್ಕಪಕ್ಕದ ನಿವಾಸಿಗಳಿಗೆ ಅನುಮಾನ ಬಂದಿದ್ದು, ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
No comments:
Post a Comment