ಬಿ. ರಮೇಶ್
ಭದ್ರಾವತಿ, ಜು. ೨೩: ನಗರದ ಬಿ.ಎಚ್ ರಸ್ತೆ ೪ನೇ ತಿರುವಿನ ನಿವಾಸಿ, ಪ್ರಜಾ ರಾಜ್ಯ ದಲಿತ ಸಂಘದ ರಾಜ್ಯಾಧ್ಯಕ್ಷ ಬಿ. ರಮೇಶ್(೫೪) ಭಾನುವಾರ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಪತ್ನಿ, ಓರ್ವ ಪುತ್ರ ಇದ್ದಾರೆ. ಶಿವಮೊಗ್ಗಕ್ಕೆ ದ್ವಿಚಕ್ರ ವಾಹನದಲ್ಲಿ ಹೋಗುವಾಗ ಅಪಘಾತ ಸಂಭವಿಸಿದ್ದು, ತೀವ್ರ ಗಾಯಗೊಂಡು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ರಮೇಶ್ ದಲಿತ ಮುಖಂಡರಾಗಿದ್ದು, ಸ್ಟೀಲ್ ಟೌನ್ ಪತ್ರಿಕೆ ಸಂಪಾದಕರಾಗಿದ್ದರು. ಹಲವಾರು ದಲಿತಪರ ಹೋರಾಟಗಳಲ್ಲಿ ಪಾಲ್ಗೊಂಡು ಗಮನ ಸೆಳೆದಿದ್ದರು.
ಬಿ. ರಮೇಶ್ ನಿಧನಕ್ಕೆ ಪ್ರಗತಿಪರ ಸಂಘಟನೆಗಳ ಮುಖಂಡರು, ಕಾರುಣ್ಯ ಚಾರಿಟಬಲ್ ಟ್ರಸ್ಟ್, ಛಾಯಾ ಗ್ರಾಹಕರ ಸಂಘದ ಕಾರ್ಯದರ್ಶಿ ಸಂಜೀವರಾವ್ ಸಿಂಧ್ಯಾ ಸೇರಿದಂತೆ ಇನ್ನಿತರರು ಸಂತಾಪ ಸೂಚಿಸಿದ್ದಾರೆ.
No comments:
Post a Comment