ಭದ್ರಾವತಿಯಲ್ಲಿ ಚುಂಚಾದ್ರಿ ಮಹಿಳಾ ವೇದಿಕೆ ವತಿಯಿಂದ ಪ್ರತಿವರ್ಷದಂತೆ ಈ ಬಾರಿ ಸಹ ವಿಶೇಷವಾಗಿ ಗುರುಪೂರ್ಣಿಮಾ ಆಚರಿಸಲಾಯಿತು.
ಭದ್ರಾವತಿ, ಜು. ೫ : ನಗರದ ಚುಂಚಾದ್ರಿ ಮಹಿಳಾ ವೇದಿಕೆ ವತಿಯಿಂದ ಪ್ರತಿವರ್ಷದಂತೆ ಈ ಬಾರಿ ಸಹ ವಿಶೇಷವಾಗಿ ಗುರುಪೂರ್ಣಿಮಾ ಆಚರಿಸಲಾಯಿತು.
ಇಂದಿನ ಪೀಳಿಗೆಗೆ ಗುರುಪೂರ್ಣಿಮಾ ಮಹತ್ವ ತಿಳಿಸಿಕೊಂಡುವ ಜೊತೆಗೆ ಧಾರ್ಮಿಕ ಪರಂಪರೆ ಎತ್ತಿ ಹಿಡಿಯುವ ಕಾರ್ಯದಲ್ಲಿ ವೇದಿಕೆ ತೊಡಗಿಸಿಕೊಂಡಿದೆ. ಹಲವಾರು ವರ್ಷಗಳಿಂದ ವಿಭಿನ್ನ ಕಾರ್ಯಕ್ರಮಗಳ ಆಯೋಜನೆ ಮೂಲಕ ಕ್ರಿಯಾಶೀಲವಾಗಿ ಮುನ್ನಡೆಯುತ್ತಿದೆ.
ಕಾರ್ಯಕ್ರಮದಲ್ಲಿ ಗುರು ಪೂರ್ಣಿಮಾ ಕುರಿತು ಪುಷ್ಟ ಕೇಶವ ಮಾತನಾಡಿದರು. ನಗರಸಭೆ ಮಾಜಿ ಅಧ್ಯಕ್ಷೆ, ವೇದಿಕ ಅಧ್ಯಕ್ಷೆ ಎಂ.ಎಸ್ ಸುಧಾಮಣಿ ಅಧ್ಯಕ್ಷತೆ ವಹಿಸಿದ್ದರು.
ಶೀಲಾ ರವಿ ಪ್ರಾರ್ಥಿಸಿ, ಲತಾ ಪ್ರಭಾಕರ್ ಸ್ವಾಗತಿಸಿದರು. ಭಾರತಿ ಕುಮಾರ್, ಮಂಗಳಾ, ಮಂಜುಳಾ, ಪ್ರೇಮ, ಕುಸುಮ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment