ಭದ್ರಾವತಿ ತಾಲೂಕಿನ ಕಾರೇಹಳ್ಳಿ ಬಿಜಿಎಸ್ ಕೇಂದ್ರೀಯ ವಿದ್ಯಾಲಯದ ವಿದ್ಯಾರ್ಥಿಗಳು ಸಹ್ಯಾದ್ರಿ ಸಹೋದಯ ಸ್ಕೂಲ್ ಕಾಂಪ್ಲೆಕ್ಸ್ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನಗಳನ್ನು ಪಡೆದುಕೊಂಡಿದ್ದಾರೆ.
ಭದ್ರಾವತಿ, ಜು. ೨೭: ತಾಲೂಕಿನ ಕಾರೇಹಳ್ಳಿ ಬಿಜಿಎಸ್ ಕೇಂದ್ರೀಯ ವಿದ್ಯಾಲಯದ ವಿದ್ಯಾರ್ಥಿಗಳು ಸಹ್ಯಾದ್ರಿ ಸಹೋದಯ ಸ್ಕೂಲ್ ಕಾಂಪ್ಲೆಕ್ಸ್ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನಗಳನ್ನು ಪಡೆದುಕೊಂಡಿದ್ದಾರೆ.
ಜಾವಳ್ಳಿ, ಓಪನ್ ಮೈಂಡ್ಸ್ ವರ್ಲ್ಡ್ ಸ್ಕೂಲ್ ಆವರಣದಲ್ಲಿ ನಡೆದ ಸ್ಪರ್ಧೆಯಲ್ಲಿ ಶಿವಮೊಗ್ಗ ಕ್ಲಸ್ಟರ್ ಸಿಬಿಎಸ್‌ಇ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಬಿಜಿಎಸ್ ಶಾಲೆ ೮ನೇ ತರಗತಿ ವಿದ್ಯಾರ್ಥಿ ಶ್ರೇಯಸ್ ಹಾಗೂ ೧೦ನೇ ತರಗತಿ ವಿದ್ಯಾರ್ಥಿಗಳಾದ ಶ್ರೇಯಾ ಎನ್ ಗೌಡ ಮತ್ತು ಪಿ. ಮನ್ವಿತ್ ದ್ವಿತೀಯ ಬಹುಮಾನ ಪಡೆದುಕೊಂಡಿದ್ದಾರೆ.
ವಿದ್ಯಾಲಯದ ಆಡಳಿತ ಮಂಡಳಿಯವರು, ಶೈಕ್ಷಣಿಕ ಸಲಹೆಗಾರರು, ಆಡಳಿತಾಧಿಕಾರಿ ಬಿ. ಜಗದೀಶ್, ಪ್ರಾಂಶುಪಾಲರಾದ ಡಾ. ಸಿ. ಅಮುದಾ, ಮುನಿರಾಜ್, ಉಪಪ್ರಾಂಶುಪಾಲ ಎ.ಎಂ ವೀರರಾಜೇಂದ್ರ ಸ್ವಾಮಿ ಹಾಗೂ ಮುಖ್ಯೋಪಾಧ್ಯಾಯಿನಿ ಕೆ.ಎನ್ ದಿವ್ಯ ಬಹುಮಾನ ವಿಜೇತರಾದ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.
No comments:
Post a Comment