ಭದ್ರಾವತಿ, ಜು. ೧೭ : ಮದ್ಯ ಸೇವಿಸಿ ವಾಹನ ಚಾಲನೆ ಮಾಡುವ ಮೂಲಕ ಸಂಚಾರಿ ಪೊಲೀಸರ ಕೈಗೆ ಸಿಕ್ಕಿಬಿದ್ದ ೫ ಮಂದಿಗೆ ನ್ಯಾಯಾಲಯ ದಂಡ ವಿಧಿಸಿರುವ ಘಟನೆ ನಡೆದಿದೆ.
ನಗರದಲ್ಲಿ ದಿನದಿಂದ ದಿನಕ್ಕೆ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಹಿನ್ನಲೆಯಲ್ಲಿ ಪ್ರತಿ ವಾರಾಂತ್ಯ ದಿನಗಳಲ್ಲಿ ಸಂಚಾರಿ ಪೊಲೀಸ್ ಠಾಣೆವತಿಯಿಂದ ವಿಶೇಷ ಕಾರ್ಯಾಚರಣೆ ನಡೆಸಿ ಮದ್ಯ ಸೇವಿಸಿ ವಾಹನ ಚಾಲನೆ ಮಾಡುವವರ ವಿರುದ್ದ ಪ್ರಕರಣ ದಾಖಲಿಸಿಕೊಳ್ಳಲಾಗುತ್ತಿದೆ.
ಒಟ್ಟು ೫ ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ೧ನೇ ಎಸಿಜೆ ನ್ಯಾಯಾಲಯದ ನ್ಯಾಯಾಧೀಶರು ತಲಾ ಒಬ್ಬರಿಗೆ ೧೦,೦೦೦ ರು. ದಂಡ ವಿಧಿಸಿದ್ದು, ಒಟ್ಟು ೫೦,೦೦೦ ರು. ದಂಡ ವಿಧಿಸಲಾಗಿದೆ.
No comments:
Post a Comment