ಭದ್ರಾವತಿ, ಜು. ೫ : ಸುಬ್ಬಯ್ಯ ಮೆಡಿಕಲ್ ಕಾಲೇಜ್ ಆಸ್ಪತ್ರೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಛೇರಿ ಹಾಗು ಜಿಲ್ಲಾ ಅಂಧತ್ವ ನಿವಾರಣಾ ವಿಭಾಗದ ಸಹಯೋಗದೊಂದಿಗೆ ಜು. ೭ರಂದು ಉಚಿತ ನೇತ್ರ ತಪಾಸಣೆ , ನೇತ್ರ ಪೊರೆ ಶಸ್ತ್ರ ಚಿಕಿತ್ಸೆ ಮತ್ತು ಮಸೂರ ಅಳವಡಿಕೆ ಶಿಬಿರ ಆಯೋಜಿಸಲಾಗಿದೆ.
ನಗರಸಭೆ ವ್ಯಾಪ್ತಿಯ ಭದ್ರಾ ಕಾಲೋನಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಬೆಳಿಗ್ಗೆ ೯.೩೦ರಿಂದ ಮಧ್ಯಾಹ್ನ ೧ ಗಂಟೆಯವರೆಗೆ ಶಿಬಿರ ನಡೆಯಲಿದ್ದು, ಸುಬ್ಬಯ್ಯ ಮೆಡಿಕಲ್ ಕಾಲೇಜ್ ಆಸ್ಪತ್ರೆ ಕಣ್ಣಿನ ವಿಭಾಗದ ನುರಿತ ಅನುಭವಿ ತಜ್ಞ ವೈದ್ಯರು ತಪಾಸಣೆ ನಡೆಸಿ ಚಿಕಿತ್ಸೆ ನೀಡಲಿದ್ದಾರೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶಿಬಿರದ ಸದುಪಯೋಗ ಪಡಿಸಿಕೊಳ್ಳಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಮೊ: ೭೮೯೨೯ ೫೨೧೭೬, ೭೮೯೨೭ ೦೩೯೬೧ ಇವರನ್ನು ಸಂಪರ್ಕಿಸಬಹುದಾಗಿದೆ.
No comments:
Post a Comment