೪ ಪ್ರಕರಣ ದಾಖಲು : ೪ ದ್ವಿಚಕ್ರ ವಶ
ಭದ್ರಾವತಿ ನ್ಯೂಟೌನ್ ಠಾಣೆ ಪೊಲೀಸರು ದ್ವಿಚಕ್ರ ವಾಹನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಭದ್ರಾವತಿ, ಜು. ೮: ನ್ಯೂಟೌನ್ ಠಾಣೆ ಪೊಲೀಸರು ದ್ವಿಚಕ್ರ ವಾಹನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ತಾಲೂಕಿನ ದಾನವಾಡಿ ಗ್ರಾಮದ ನಿವಾಸಿ ಉಮೇಶ್(೪೧) ಬಂಧಿತ ವ್ಯಕ್ತಿಯಾಗಿದ್ದು, ಈತನಿಂದ ಒಟ್ಟು ೧.೨೫ ಲಕ್ಷ ರು. ಮೌಲ್ಯದ ನಾಲ್ಕು ವಿವಿಧ ಕಂಪನಿಯ ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ನ್ಯೂಟೌನ್ ಠಾಣೆಯಲ್ಲಿ ಒಟ್ಟು ೩ ಪ್ರಕರಣ ಹಾಗು ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಒಂದು ಕಳವು ಪ್ರಕರಣ ದಾಖಲಾಗಿತ್ತು.
ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ ಮಿಥುನ್ ಕುಮಾರ್, ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್‌ಕುಮಾರ್ ಭೂಮಾರೆಡ್ಡಿ, ಹಿರಿಯ ಸಹಾಯಕ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಯಾಮರವರ ಮಾರ್ಗದರ್ಶನದಲ್ಲಿ ಠಾಣಾಧಿಕಾರಿಗಳಾದ ಟಿ. ರಮೇಶ್ ಮತ್ತು ಭಾರತಿ ನೇತೃತ್ವದಲ್ಲಿ ಸಹಾಯಕ ಠಾಣಾಧಿಕಾರಿ ವೆಂಕಟೇಶ್ ಹಾಗು ಸಿಬ್ಬಂದಿಗಳಾದ ರಂಗನಾಥ್, ತೀರ್ಥಲಿಂಗಪ್ಪ ಮತ್ತು ಪ್ರವೀಣ್ ಕುಮಾರ್ ತಂಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡು ಯಶಸ್ವಿಯಾಗಿದೆ.
No comments:
Post a Comment