ಭದ್ರಾವತಿ ನ್ಯೂಟೌನ್, ಅಮಲೋದ್ಭವಿ ಮಾತೆ ದೇವಾಲಯದಲ್ಲಿ 2022-2023ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಭದ್ರಾವತಿ, ಜು. ೨೪ : ನಗರದ ನ್ಯೂಟೌನ್, ಅಮಲೋದ್ಭವಿ ಮಾತೆ ದೇವಾಲಯದಲ್ಲಿ 2022-2023ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಧರ್ಮಕೇಂದ್ರದ ಗುರು ಫಾದರ್ ಲ್ಯಾನ್ಸಿ ಡಿಸೋಜಾ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಪಾಲನಾ ಪರಿಷತ್ತಿನ ಕಾರ್ಯದರ್ಶಿ ಅಂತೋಣಿ ವಿಲ್ಸನ್ ಕಾರ್ಯಕ್ರಮದ ಮಹತ್ವದ ತಿಳಿಸಿದರು.
ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ಮಕ್ಕಳಿಗೂ ಉಡುಗೊರೆ ನೀಡಿ
ಪ್ರೋತ್ಸಾಹಿಸಲಾಯಿತು. ವಿಮಲಾ ಕಾರ್ಯಕ್ರಮ ನಿರೂಪಿಸಿದರು. ಫಾದರ್ ಲ್ಯಾನ್ಸಿ ಡಿಸೋಜಾ ವಂದಿಸಿದರು.
No comments:
Post a Comment