ಭದ್ರಾವತಿ, ಜು. ೬ : ರಂಗ ಕಲಾವಿದರು ಒಕ್ಕೂಟದ ಉದ್ಘಾಟನಾ ಕಾರ್ಯಕ್ರಮ ಜು. ೮ರ ಸಂಜೆ ೪ ಗಂಟೆಗೆ ಹಳೇನಗರದ ಕನಕಮಂಟಪದಲ್ಲಿ ನಡೆಯಲಿದೆ.
ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ನಗರಸಭೆ ಅಧ್ಯಕ್ಷೆ ಶೃತಿ ವಸಂತಕುಮಾರ್, ಪೌರಾಯುಕ್ತ ಮನುಕುಮಾರ್ ಉಪಸ್ಥಿತರಿರುವರು.
ರಂಗಕರ್ಮಿ ಹೊನ್ನಾಳಿ ಚಂದ್ರಶೇಖರ್ ರಂಗಭೂಮಿ ಕುರಿತು ಉಪನ್ಯಾಸ ನೀಡಲಿದ್ದು, ಒಕ್ಕೂಟದ ಅಧ್ಯಕ್ಷ ಬಿ. ಕಮಲಾಕರ್ ಅಧ್ಯಕ್ಷತೆ ವಹಿಸಲಿದ್ದಾರೆ.
No comments:
Post a Comment