ಭದ್ರಾವತಿ, ಜು. ೨೩: ನಗರದ ರಂಗ ಕಲಾವಿದರ ಒಕ್ಕೂಟದಿಂದ ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಯೋಗದೊಂದಿಗೆ ಜು.೨೪ರಂದು ಒಂದು ದಿನದ ರಂಗ ತರಬೇತಿ ಶಿಬಿರ ಆಯೋಜಿಸಲಾಗಿದೆ.
ಬೆಳಿಗ್ಗೆ ೧೦ ಗಂಟೆಯಿಂದ ಆರಂಭಗೊಳ್ಳಲಿರುವ ಶಿಬಿರಕ್ಕೆ ಪೌರಾಯುಕ್ತ ಎಚ್.ಎಂ ಮನುಕುಮಾರ್ ಚಾಲನೆ ನೀಡಲಿದ್ದು, ಕಾಲೇಜಿನ ಪ್ರಾಂಶುಪಾಲ ಡಾ. ಮಂಜುನಾಥ್ ಸಕಲೇಶ್ ಅಧ್ಯಕ್ಷತೆ ವಹಿಸಲಿದ್ದಾರೆ.
ರಂಗ ಕಲಾವಿದರ ಒಕ್ಕೂಟದ ಅಧ್ಯಕ್ಷ ಬಿ. ಕಮಲಾಕರ, ಕಾಲೇಜಿನ ಐಕ್ಯೂಎಸಿ ಸಂಚಾಲಕ ಡಾ. ಟಿ. ಪ್ರಸನ್ನ, ಸಾಂಸ್ಕೃತಿಕ ವೇದಿಕೆ ಸಂಚಾಲಕ ಎನ್. ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.
No comments:
Post a Comment