ಅರವಿಂದ ಪಟೇಲ್
ಭದ್ರಾವತಿ, ಜು. ೧೧ : ನಗರದ ಜನ್ನಾಪುರ ನಿವಾಸಿ ಅರವಿಂದ ಪಟೇಲ್(೪೩) ಮಂಗಳವಾರ ನಿಧನ ಹೊಂದಿದರು.
ಪತ್ನಿ, ಓರ್ವ ಪುತ್ರ ಇದ್ದರು. ಏಕಾಏಕಿ ಅನಾರೋಗ್ಯಕ್ಕೆ ಒಳಗಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅರವಿಂದ ಪಟೇಲ್ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮಾಜಿ ಜಿಲ್ಲಾ ಉಪಾಧ್ಯಕ್ಷೆ ಮಂಜುಳಾ ನಂಜುಂಡಪ್ಪನವರ ಪುತ್ರರಾಗಿದ್ದಾರೆ. ಇವರ ಅಂತ್ಯಕ್ರಿಯೆ ಮಧ್ಯಾಹ್ನ ಅವರ ತೋಟದಲ್ಲಿ ನೆರವೇರಿತು.
ಇವರ ನಿಧನಕ್ಕೆ ಜೇಡಿಕಟ್ಟೆ ಶ್ರೀ ಮರುಳ ಸಿದ್ದೇಶ್ವರ ಜನಕಲ್ಯಾಣ ಟ್ರಸ್ಟ್ ಅಧ್ಯಕ್ಷ ಸಿದ್ದಲಿಂಗಯ್ಯ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಅಧ್ಯಕ್ಷ ಜಿ. ಸುರೇಶಯ್ಯ, ಬಿಜೆಪಿ ಪಕ್ಷದ ಯುವ ಮುಖಂಡ ಮಂಗೋಟೆ ರುದ್ರೇಶ್, ಉದ್ಯಮಿ ಬಿ. ಕೆ ಜಗನ್ನಾಥ್ ಹಾಗು ನಗರಸಭಾ ಸದಸ್ಯರುಗಳು ಸಂತಾಪ ಸೂಚಿಸಿದ್ದಾರೆ.
No comments:
Post a Comment