ಭದ್ರಾವತಿ, ಆ. ೧೪: ನಗರದ ಹೃದಯ ಭಾಗದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಿಂಭಾಗದಲ್ಲಿ ನಿರ್ಮಾಣಗೊಳ್ಳುತ್ತಿರುವ ಡಾ. ಬಿ.ಆರ್ ಅಂಬೇಡ್ಕರ್ ಭವನ ಕಾಮಗಾರಿ ತಕ್ಷಣ ಮುಕ್ತಾಯಗೊಳಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಬೇಕೆಂದು ಆಗ್ರಹಿಸಿ ಸೋಮವಾರ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

ವೇದಿಕೆ ಅಧ್ಯಕ್ಷ ಬಿ.ಎನ್.ರಾಜು ಮಾತನಾಡಿ, ಅನುದಾನ ಕೊರತೆಯಿಂದ ಕಳೆದ ಸುಮಾರು ೬ ವರ್ಷದಿಂದ ಭವನದ ಕಾಮಗಾರಿ ಪೂರ್ಣಗೊಳ್ಳದೆ ಅಪೂರ್ಣಗೊಂಡಿದ್ದು, ಕಟ್ಟಡ ಶಿಥಿಲಗೊಳ್ಳುತ್ತಿದ್ದರು ಜಿಲ್ಲಾಡಳಿತ, ಸಂಸದರು, ಶಾಸಕರು, ಚುನಾಯಿತ ಪ್ರತಿನಿಧಿಗಳು ದಿವ್ಯ ನಿರ್ಲಕ್ಷ ಧೋರಣೆ ವಹಿಸಿರುವುದು ಖಂಡನೀಯ. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಭವನ ಪೂರ್ಣಗೊಳಿಸದೆ ಅವಮಾನ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕ್ರಾಂತಿಕಾರಿ ರಾಜಕಾರಣಿ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಬಂಗಾರಪ್ಪರವರ ಪುತ್ರರಾಗಿರುವ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಿಕ್ಷಣ ಸಚಿವರಾದ ಮಧುಬಂಗಾರಪ್ಪರವರು ಅಪೂರ್ಣಗೊಂಡ ಅಂಬೇಡ್ಕರ್ ಭವನಕ್ಕೆ ಅಗತ್ಯವಿರುವ ಹಣ ಬಿಡುಗಡೆ ಗೊಳಿಸಿ ಕಾಮಗಾರಿ ಪೂರ್ಣಗೊಳಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಲೋಕಾರ್ಪಣೆಗೊಳಿಸಿ ಮಾದರಿ ಜನಪ್ರತಿನಿಧಿಯಾಗಬೇಕೆಂದು ಮನವಿ ಮಾಡಿದರು.
ಪ್ರತಿಭಟನೆಯಲ್ಲಿ ಪ್ರಮುಖರಾದ ಅಕ್ರಂಖಾನ್, ಐ.ಎಲ್ ಅರುಣ್‌ಕುಮಾರ್, ಶೇಖರ್, ರಂಗಪ್ಪ, ಶ್ರೀನಿವಾಸ್, ಬ್ರಹ್ಮಲಿಂಗಯ್ಯ, ಸುನಿಲ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಗೋಪಾಲಪ್ಪ ರವರ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ, ಶಿಕ್ಷಣ ಸಚಿವ ಮಧು ಬಂಗಾರಪ್ಪ ರವರಿಗೆ ಮನವಿ ಸಲ್ಲಿಸಲಾಯಿತು.
No comments:
Post a Comment