ನಗರಸಭೆಯಿಂದ ೯ ಸ್ಥಳಗಳಲ್ಲಿ ವ್ಯವಸ್ಥೆ
ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣ ಉದ್ದೇಶದಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ತಲಾ ೨,೦೦೦ ರು. ನೀಡುವ ಮಹತ್ವಾಕಾಂಕ್ಷೆ ʻಗೃಹ ಲಕ್ಷ್ಮೀ ʼ ಯೋಜನೆಗೆ ಬುಧವಾರ ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಅವರು ಮೈಸೂರಿನಲ್ಲಿ ಚಾಲನೆ ನೀಡಿದ್ದು, ಈ ಸಂಬಂಧ ಭದ್ರಾವತಿ ನಗರದ ವೀರಶೈವ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ನೇರ ಸಂವಾದ ಕಾರ್ಯಕ್ರಮ ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.
ಭದ್ರಾವತಿ, ಆ. ೩೦ : ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣ ಉದ್ದೇಶದಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ತಲಾ ೨,೦೦೦ ರು. ನೀಡುವ ಮಹತ್ವಾಕಾಂಕ್ಷೆ ʻಗೃಹ ಲಕ್ಷ್ಮೀ ʼ ಯೋಜನೆಗೆ ಬುಧವಾರ ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಅವರು ಮೈಸೂರಿನಲ್ಲಿ ಚಾಲನೆ ನೀಡಿದ್ದು, ಈ ಸಂಬಂಧ ನಗರದ ವೀರಶೈವ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ನೇರ ಸಂವಾದ ಕಾರ್ಯಕ್ರಮ ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.
ನಗರಸಭೆ ವತಿಯಿಂದ ನಗರ ವ್ಯಾಪ್ತಿಯಲ್ಲಿ ಒಟ್ಟು ೯ ಸ್ಥಗಳಲ್ಲಿ ಕಾರ್ಯಕ್ರಮದ ನೇರ ಪ್ರಸಾರ ವ್ಯವಸ್ಥೆ ಕಲ್ಪಿಸಲಾಗಿತ್ತು. ಆಯಾ ವ್ಯಾಪ್ತಿಯ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಕಾರ್ಯಕ್ರಮ ಯಶಸ್ವಿಗೆ ಶ್ರಮಿಸಿದರು.
ಕಾರ್ಯಕ್ರಮದಲ್ಲಿ ʻಗೃಹಲಕ್ಷ್ಮೀʼ ಯೋಜನೆ ಫಲಾನುಭವಿಗಳು, ಮಹಿಳಾ ಸಂಘ-ಸಂಸ್ಥೆಗಳ ಪ್ರಮುಖರು, ಕಾಂಗ್ರೆಸ್ ಮಹಿಳಾ ಘಟಕದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಇನ್ನಿತರರು ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ವೀರಶೈವ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ನೇರ ಸಂವಾದ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ನಾಗರಾಜಪ್ಪ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುರೇಶ್, ನಗರಸಭಾ ಸದಸ್ಯಾದ ಜಾರ್ಜ್, ಆರ್. ಶ್ರೇಯಸ್, ಶಶಿಕಲಾ ಬಿ.ಎಸ್ ನಾರಾಯಣಪ್ಪ, ಅನುಪಮ ಚನ್ನೇಶ್, ಪೌರಾಯುಕ್ತ ಎಚ್.ಎಂ ಮನುಕುಮಾರ್, ಕಂದಾಯಾಧಿಕಾರಿ ರಾಜ್‌ಕುಮಾರ್, ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಎಸ್. ಕುಮಾರ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
No comments:
Post a Comment