ಭದ್ರಾವತಿ ನಗರದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿರುವ ರೌಡಿ ಶೀಟರ್‌ಗಳು ಹಾಗು ಅಪರಾಧ ಕೃತ್ಯಗಳನ್ನೇ ರೂಢಿಸಿಕೊಂಡಿರುವ ಪದೇ ಪದೇ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗುತ್ತಿರುವವರನ್ನು ಭಾನುವಾರ ಕರೆ ತಂದು ವಿಚಾರಣೆ ನಡೆಸಿ ಎಚ್ಚರಿಕೆ ನೀಡಲಾಯಿತು.
ಭದ್ರಾವತಿ, ಆ. ೨೦: ನಗರದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿರುವ ರೌಡಿ ಶೀಟರ್‌ಗಳು ಹಾಗು ಅಪರಾಧ ಕೃತ್ಯಗಳನ್ನೇ ರೂಢಿಸಿಕೊಂಡಿರುವ ಪದೇ ಪದೇ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗುತ್ತಿರುವವರನ್ನು ಭಾನುವಾರ ಕರೆ ತಂದು ವಿಚಾರಣೆ ನಡೆಸಿ ಎಚ್ಚರಿಕೆ ನೀಡಲಾಯಿತು.
ಪೊಲೀಸ್ ನಗರವೃತ್ತ ನಿರೀಕ್ಷಕರ ಕಛೇರಿ ಆವರಣದಲ್ಲಿ ಪೊಲೀಸ್ ಉಪಾಧೀಕ್ಷಕ ಕೆ.ಆರ್ ನಾಗರಾಜ್‌ರವರು ವಿವಿಧ ಠಾಣೆಗಳ ಪ್ರಕರಣಗಳ ವಿಚಾರಣೆ ನಡೆಸುವ ಮೂಲಕ ಮುಂದಿನ ದಿನಗಳಲ್ಲಿ ಯಾವುದೇ ಅಪರಾಧ ಕೃತ್ಯಗಳಿಗೆ ಆಸ್ಪದ ನೀಡದೆ. ಸಮಾಜದಲ್ಲಿ ಶಾಂತಿ, ಸೌಹಾರ್ದತೆಯಿಂದ ವರ್ತಿಸುವಂತೆ ಎಚ್ಚರಿಕೆ ನೀಡಿದರು.
ನಗರವೃತ್ತ ನಿರೀಕ್ಷಕ ಜೆ. ಶೈಲಕುಮಾರ್ ಹಾಗು ವಿವಿಧ ಪೊಲೀಸ್ ಠಾಣೆಗಳ ಠಾಣಾಧಿಕಾರಿಗಳು ಉಪಸ್ಥಿತರಿದ್ದರು.
No comments:
Post a Comment