ಭದ್ರಾವತಿ : ಇಲ್ಲಿಗೆ ಸಮೀಪದ ಶ್ರೀ ಕ್ಷೇತ್ರ ಭದ್ರಗಿರಿ ಶ್ರೀ ಶಿವಸುಬ್ರಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಶುಕ್ರವಾರ ಆಡಿ ಕೃತ್ತಿಕೆ ಜಾತ್ರಾ ಮಹೋತ್ಸವಕ್ಕೆ ಧ್ವಜಾರೋಹಣದೊಂದಿಗೆ ಚಾಲನೆ ನೀಡಲಾಯಿತು.
ಭದ್ರಾವತಿ, ಆ. ೪ : ಇಲ್ಲಿಗೆ ಸಮೀಪದ ಶ್ರೀ ಕ್ಷೇತ್ರ ಭದ್ರಗಿರಿ ಶ್ರೀ ಶಿವಸುಬ್ರಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಶುಕ್ರವಾರ ಆಡಿ ಕೃತ್ತಿಕೆ ಜಾತ್ರಾ ಮಹೋತ್ಸವಕ್ಕೆ ಧ್ವಜಾರೋಹಣದೊಂದಿಗೆ ಚಾಲನೆ ನೀಡಲಾಯಿತು.
ಪ್ರತಿ ವರ್ಷದಂತೆ ಈ ಬಾರಿ ಸಹ ಆಡಿ ಕೃತಿಕೆ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ಶ್ರೀ ಕ್ಷೇತ್ರದ ಶ್ರೀ ಮುರುಗೇಶ್ ಸ್ವಾಮೀಜಿ ನೇತೃತ್ವದಲ್ಲಿ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು. ಆ.೮ರಂದು ಭರಣಿ ಕಾವಡಿ ಉತ್ಸವ ಮತ್ತು ೯ರಂದು ಆಡಿ ಕೃತಿಕೆ ಜಾತ್ರೆ ನಡೆಯಲಿದೆ.
ವಿಶ್ವ ಹಿಂದೂ ಪರಿಷತ್ ದಕ್ಷಿಣ ಪ್ರಾಂತೀಯ ಉಪಾಧ್ಯಕ್ಷ ಹಾ. ರಾಮಪ್ಪ, ನ್ಯೂಟೌನ್ ಮಾರಿಯಮ್ಮ ದೇವಸ್ಥಾನದ ಪಾರ್ಥಿಬ ಕುಮಾರ್, ತಮಿಳು ಸಮಾಜದ ಅಧ್ಯಕ್ಷ ರವಿಕುಮಾರ್, ಪ್ರಮುಖರಾದ ಚಂದ್ರಘೋಷಣ್, ಕರುಣಾಮೂರ್ತಿ, ಮಂಜುನಾಥ್, ತಿರುಮೂರ್ತಿ, ಶ್ರೀ ಕ್ಷೇತ್ರದ ಆಡಳಿತ ಮಂಡಳಿ ಅಧ್ಯಕ್ಷರು, ಸದಸ್ಯರುಗಳು, ಭದ್ರಗಿರಿ ಸೇವಾ ಟ್ರಸ್ಟ್ ಪದಾಧಿಕಾರಿಗಳು ಹಾಗು ಭಕ್ತ ವೃಂದದವರು ಪಾಲ್ಗೊಂಡಿದ್ದರು.
No comments:
Post a Comment