ಭದ್ರಾವತಿ, ಆ. ೨೫: ಕರ್ನಾಟಕ ಜಾನಪದ ಪರಿಷತ್ ತಾಲೂಕು ಘಟಕದ ವತಿಯಿಂದ ಆ.೨೬ರ ಶನಿವಾರ ಸಂಜೆ ೪ ಗಂಟೆಗೆ ಭಂಡಾರಹಳ್ಳಿ ಶ್ರೀ ಕಣಿವೆ ಮಾರಮ್ಮ ದೇವಾಲಯದ ಆವರಣದಲ್ಲಿ ವಿಶ್ವ ಜಾನಪದ ದಿನಾಚರಣೆ ಆಯೋಜಿಸಲಾಗಿದೆ.
ನಗರಸಭೆ ಅಧ್ಯಕ್ಷೆ ಶೃತಿ ವಸಂತ ಕುಮಾರ್ ಕಾರ್ಯಕ್ರಮ ಉದ್ಘಾಟಿಸುವರು. ಪರಿಷತ್ ತಾಲೂಕು ಅಧ್ಯಕ್ಷ ಎಂ.ಆರ್. ರೇವಣಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್, ನಗರಸಭೆ ಉಪಾಧ್ಯಕ್ಷೆ ಸರ್ವಮಂಗಳಾ ಭೈರಪ್ಪ, ಪೌರಾಯುಕ್ತ ಮನುಕುಮಾರ್, ಶ್ರೀ ಕಣಿವೆ ಮಾರಮ್ಮ ದೇವಾಲಯ ಸಮಿತಿ ಅಧ್ಯಕ್ಷ ಪರಮೇಶ್ವರಪ್ಪ, ಕೆ.ಬಿ.ಗಂಗಾಧರ್, ಹನುಮಂತಪ್ಪ, ಕೆ.ಜಿ.ರವಿಕುಮಾರ್, ಬಿ. ಗಂಗಾಧರ್, ರಾಜಣ್ಣ, ಕೋಡ್ಲು ಯಜ್ಜಯ್ಯ, ಸುಧಾಮಣಿ, ಗೊಂದಿ ಜಯರಾಂ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.
ಕಲಾ ಪ್ರಕಾರಗಳಾದ ಡೊಳ್ಳು ಕುಣಿತ, ಚೌಡಿಕೆ ಪದ, ಜಾನಪದ ಗಾಯನ, ಗೀಗೀ ಪದ ಹಾಗೂ ಬಣಜಾರ್ ನೃತ್ಯ ಪ್ರದರ್ಶನ ನಡೆಯಲಿದೆ.
No comments:
Post a Comment