ಭದ್ರಾವತಿ ಹಳೇನಗರದ ತರೀಕೆರೆ ರಸ್ತೆಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ವೈ.ಡಿ ಹಿರಿಯಣ್ಣ ವಯೋನಿವೃತ್ತಿ ಹೊಂದಿದ್ದು, ಇವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು.
ಭದ್ರಾವತಿ, ಆ. ೫ : ಹಳೇನಗರದ ತರೀಕೆರೆ ರಸ್ತೆಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ವೈ.ಡಿ ಹಿರಿಯಣ್ಣ ವಯೋನಿವೃತ್ತಿ ಹೊಂದಿದ್ದು, ಇವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು.
ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಜಿಲ್ಲಾ ಉಪನಿರ್ದೇಶಕರ ನೇತೃತ್ವದಲ್ಲಿ ವೈ.ಡಿ ಹಿರಿಯಣ್ಣ ದಂಪತಿಯನ್ನು ಸನ್ಮಾನಿಸುವ ಮೂಲಕ ಅವರ ವೃತ್ತಿ ಸೇವೆಯನ್ನು ಸ್ಮರಿಸಲಾಯಿತು.
ಶಿವಮೊಗ್ಗ-ಚಿಕ್ಕಮಗಳೂರು ಜಿಲ್ಲೆಯ ಪ್ರಾಚಾರ್ಯರು, ಉಪನ್ಯಾಸಕರು ಮತ್ತು ಬೋಧಕೇತರ ಸಿಬ್ಬಂದಿಯವರು, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು, ತಾಲೂಕು ಉಪನ್ಯಾಸಕರ ಸಂಘದ ಪದಾಧಿಕಾರಿಗಳು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
, ಕಾಲೇಜಿನ ಹಿರಿಯ ಉಪನ್ಯಾಸಕ ಎಚ್.ಬಿ ಪ್ರಕಾಶ್ ಅವರನ್ನು ಪ್ರಭಾರ ಪ್ರಾಚಾರ್ಯರ ಹುದ್ದೆಗೆ ನಿಯೋಜನೆ ಗೊಳಿಸಲಾಗಿದೆ.
No comments:
Post a Comment