ಚಂದ್ರಯಾನ-೦೩
ಭದ್ರಾವತಿ, ಆ. ೨೪: ನಗರದ ಹಿರಿಯ ನಾಣ್ಯ, ನೋಟು ಹಾಗು ಅಂಚೆ ಚೀಟಿ ಸಂಗ್ರಹಗಾರ ಗಣೇಶ್‌ರವರು ಚಂದ್ರಯಾನ-೦೩ ಯಶಸ್ವಿಯಾದ ಹಿನ್ನಲೆಯಲ್ಲಿ ಇಸ್ರೋ ಸಾಧನೆಯನ್ನು ನೋಟು ಸಮರ್ಪಿಸಿ ಅಭಿನಂದಿಸಿದ್ದಾರೆ.
ಐತಿಹಾಸಿಕ ಸಾಧನೆಯ ದಿನಾಂಕ ಹೊಂದಿರುವ ರು.೧೦ ಮುಖ ಬೆಲೆಯ ನೋಟು ಸಮರ್ಪಿಸಿದ್ದಾರೆ.
ಐತಿಹಾಸಿಕ ಸಾಧನೆಯ ದಿನಾಂಕ ಹೊಂದಿರುವ ನೋಟು.
ರಾಜಕಾರಣಿಗಳು, ಮಠಾಧೀಶರು, ಚಲನಚಿತ್ರ ನಟರು, ಸಾಹಿತಿಗಳು, ಕವಿ, ಕ್ರೀಡಾಪಟು ಸೇರಿದಂತೆ ಗಣ್ಯ ವ್ಯಕ್ತಿಗಳಿಗೆ ಸಭೆ ಸಮಾರಂಭಗಳಲ್ಲಿ ಅವರ ಜನ್ಮದಿನಾಂಕ ಹೊಂದಿರುವ ನೋಟು ಉಡುಗೊರೆಯಾಗಿ ನೀಡುವ ಮೂಲಕ ಶುಭ ಹಾರೈಸುವ ಹಾಗು ನಿಧನರಾದ ಸಂದರ್ಭದಲ್ಲಿ ಮರಣ ದಿನಾಂಕ ಹೊಂದಿರುವ ನೋಟಿನ ಮೂಲಕ ಸಂತಾಪ ಸೂಚಿಸುವ ಹವ್ಯಾಸ ಬೆಳೆಸಿಕೊಂಡು ಬಂದಿದ್ದಾರೆ.
ಹಿರಿಯ ಹಿರಿಯ ನಾಣ್ಯ, ನೋಟು ಹಾಗು ಅಂಚೆ ಚೀಟಿ ಸಂಗ್ರಹಗಾರ ಗಣೇಶ್
No comments:
Post a Comment