ಭದ್ರಾವತಿ, ಆ. ೧: ಸಾರ್ವಜನಿಕ ಕುಂದು ಕೊರತೆ ಹೋರಾಟ ಸಮಿತಿ ವತಿಯಿಂದ ಯೋಧಯೊಬ್ಬರಿಗೆ ಸೇರಿದ ಜಾಗವನ್ನು ಅಕ್ರಮವಾಗಿ ಅತಿಕ್ರಮಿಸಿ ಕಬಳಿಸಲು ಯತ್ನಿಸುತ್ತಿರುವುದನ್ನು ವಿರೋಧಿಸಿ ಆ.೨ರಂದು ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ.
ಬೊಮ್ಮನಕಟ್ಟೆ ವಾರ್ಡ್ ನಂ.೨೩ರಲ್ಲಿರುವ ಸರ್ವೆ ನಂ.೯೧ರ ಬಡಾವಣೆಯಲ್ಲಿ ವಿ. ಗುರುವಯ್ಯನ ಹೆಸರಿನಲ್ಲಿರುವ ಖಾತೆ ನಂ.೧೨೦೨/೩೮, ಸೈಟ್ ನಂ.೩೮ನ್ನು ಅಕ್ರಮವಾಗಿ ಅತಿಕ್ರಮಿಸಿ ಕಬಳಿಸಲು ಯತ್ನಿಸುತ್ತಿದ್ದು, ಇದನ್ನು ವಿರೋಧಿಸಿ ನಗರಸಭೆ ಮುಂಭಾಗ ಬೆಳಿಗ್ಗೆ ೧೦.೩೦ಕ್ಕೆ ಧರಣಿ ಸತ್ಯಾಗ್ರಹ ನಡೆಯಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ.
No comments:
Post a Comment