ಭದ್ರಾವತಿ, ಆ. ೨೭: ತಾಲೂಕಿನ ದೊಡ್ಡೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳ್ಳಿಗೆರೆ ಗ್ರಾಮದಲ್ಲಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ.
ಬಾಬು(೪೫) ಮೃತಪಟ್ಟಿದ್ದು, ಸಾವಿಗೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ. ಮತ್ತೊಂದೆಡೆ ಕೊಲೆ ಮಾಡಲಾಗಿದೆ ಎಂಬ ಸುದ್ದಿ ಎಲ್ಲೆಡೆ ವ್ಯಾಪಕವಾಗಿ ಹಬ್ಬಿದ್ದು, ಈ ಸಂಬಂಧ ಗ್ರಾಮಾಂತರ ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಪ್ರಕರಣ ದಾಖಲಾಗಿಲ್ಲ.
No comments:
Post a Comment