ಶಿವಮೊಗ್ಗ-ಭದ್ರಾವತಿ ನಡುವಿನ 206 ಹೆದ್ದಾರಿಯಲ್ಲಿ ಗುರುವಾರ ರಾತ್ರಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಟ್ಯಾಕ್ಸಿ ನಡುವೆ ಅಪಘಾತ ಸಂಭವಿಸಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಭದ್ರಾವತಿ, ಆ. ೪: ಶಿವಮೊಗ್ಗ-ಭದ್ರಾವತಿ ನಡುವಿನ 206 ಹೆದ್ದಾರಿಯಲ್ಲಿ ಗುರುವಾರ ರಾತ್ರಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಟ್ಯಾಕ್ಸಿ ನಡುವೆ ಅಪಘಾತ ಸಂಭವಿಸಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಜೈನ್ ಪಬ್ಲಿಕ್ ಶಾಲೆಯ ಬಳಿಯಲ್ಲಿ ಅಪಘಾತ ಸಂಭವಿಸಿದ್ದು, ಮೈಸೂರಿನಿಂದ ಶಿವಮೊಗ್ಗ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಹಾಗೂ ಶಿವಮೊಗ್ಗದಿಂದ ಭದ್ರಾವತಿಗೆ ತೆರಳುತ್ತಿದ್ದ ಟ್ಯಾಕ್ಸಿ ನಡುವೆ ಡಿಕ್ಕಿ ಸಂಭವಿಸಿದೆ.
ಟ್ಯಾಕ್ಸಿಯಲ್ಲಿದ್ದ ಪ್ರಯಾಣಿಕರಲ್ಲಿ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬಸ್ ಹಾಗೂ ಟ್ಯಾಕ್ಸಿ ಮುಂಭಾಗ ಜಖಂಗೊಂಡಿದೆ.
ಶಿವಮೊಗ್ಗ-ಭದ್ರಾವತಿ ನಡುವೆ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಹಲವು ಕಡೆಗಳಲ್ಲಿ ಏಕ ಮುಖ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಆದರೆ, ಹಲವು ಕಡೆಗಳಲ್ಲಿ ರಸ್ತೆ ಉತ್ತಮವಾಗಿರುವ ಹಿನ್ನೆಲೆಯಲ್ಲಿ ವಾಹನಗಳ ವೇಗವೂ ಸಹ ಹೆಚ್ಚಾಗಿರುವುದು ಇಂತಹ ಅಪಘಾತಗಳಿಗೆ ಕಾರಣವಾಗಿದೆ ಎನ್ನಲಾಗುತ್ತಿದೆ.
No comments:
Post a Comment