ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ) ಭದ್ರಾವತಿ ತಾಲೂಕು ಶಾಖೆ ವತಿಯಿಂದ ಉಂಬ್ಳೆಬೈಲ್ ರಸ್ತೆಯಲ್ಲಿರುವ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ 'ಕ್ರಾಂತಿಕಾರಿ ಗದ್ದರ್-ಒಂದು ನೆನಪು' ಕಾರ್ಯಕ್ರಮ ಡಿಎಸ್‌ಎಸ್ ರಾಜ್ಯ ಸಂಘಟನಾ ಸಂಚಾಲಕ ಎಸ್.ಎನ್. ಮಲ್ಲಪ್ಪ ಕಾರ್ಯಕ್ರಮ ಉದ್ಘಾಟಿಸಿದರು.
ಭದ್ರಾವತಿ, ಆ. ೨೩: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ) ತಾಲೂಕು ಶಾಖೆ ವತಿಯಿಂದ ಉಂಬ್ಳೆಬೈಲ್ ರಸ್ತೆಯಲ್ಲಿರುವ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ 'ಕ್ರಾಂತಿಕಾರಿ ಗದ್ದರ್-ಒಂದು ನೆನಪು' ಕಾರ್ಯಕ್ರಮ ಬುಧವಾರ ನಡೆಯಿತು.
ಡಿಎಸ್‌ಎಸ್ ರಾಜ್ಯ ಸಂಘಟನಾ ಸಂಚಾಲಕ ಎಸ್.ಎನ್. ಮಲ್ಲಪ್ಪ ಕಾರ್ಯಕ್ರಮ ಉದ್ಘಾಟಿಸಿದರು. ತಾಲೂಕು ಸಂಚಾಲಕ ಕೆ ರಂಗನಾಥ್ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಖಜಾಂಚಿ ಸತ್ಯ ಭದ್ರಾವತಿ ಪ್ರಸ್ತಾವಿಕ ನುಡಿಗಳನ್ನಾಡಿದರು.
ಜಿಲ್ಲಾ ಸಂಚಾಲಕ ಚಿನ್ನಯ್ಯ, ಮುಖಂಡರಾದ ಕರ್ನಾಟಕ ಜನಶಕ್ತಿ ಪ್ರಧಾನ ಕಾರ್ಯದರ್ಶಿ ಕೆ.ಎಲ್. ಅಶೋಕ್, ದೇವೇಂದ್ರಪ್ಪ, ಸಿ. ಜಯಪ್ಪ, ಜಿ. ರಾಜು, ಕಾಣಿಕ್ ರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
No comments:
Post a Comment