ಭದ್ರಾವತಿ, ಆ. ೧೯: ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗು ನಗರಸಭೆ ವತಿಯಿಂದ ಮಾಜಿ ಮುಖ್ಯಮಂತ್ರಿ, ಹಿಂದುಳಿದ ವರ್ಗಗಳ ನೇತಾರ, ಸಾಮಾಜಿಕ ನ್ಯಾಯದ ಹರಿಕಾರ ಡಿ. ದೇವರಾಜ ಅರಸುರವರ ೧೦೮ನೇ ಜನ್ಮದಿನ ಆ.೨೦ರಂದು ಬೆಳಿಗ್ಗೆ ೧೦ ಗಂಟೆಗೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಚರಿಸಲಾಗುತ್ತಿದೆ.
ಶಾಸಕ ಬಿ.ಕೆ ಸಂಗಮೇಶ್ವರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕಿ ಶಾರದ ಪೂರ್ಯಾನಾಯ್ಕ್ ಉದ್ಘಾಟಿಸಲಿದ್ದಾರೆ. ಸಚಿವರಾದ ಎಸ್. ಮಧು ಬಂಗಾರಪ್ಪ, ಶಿವರಾಜ ಸಂಗಪ್ಪ ತಂಗಡಗಿ, ಡಿ. ಸುಧಾಕರ್, ಸಂಸದ ಬಿ.ವೈ ರಾಘವೇಂದ್ರ, ವಿಧಾನಪರಿಷತ್ ಸದಸ್ಯರಾದ ಎಸ್.ಎಲ್ ಭೋಜೇಗೌಡ, ಎಸ್. ರುದ್ರೇಗೌಡ, ಭಾರತಿ ಶೆಟ್ಟಿ, ಡಿ.ಎಸ್ ಅರುಣ್, ನಗರಸಭೆ ಅಧ್ಯಕ್ಷೆ ಶೃತಿ ವಸಂತಕುಮಾರ್, ಉಪಾಧ್ಯಕ್ಷೆ ಸರ್ವಮಂಗಳ ಭೈರಪ್ಪ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ತಹಸೀಲ್ದಾರ್ ಕೆ.ಆರ್ ನಾಗರಾಜ್, ಗ್ರೇಡ್-೨ ತಹಸೀಲ್ದಾರ್ ವಿ. ರಂಗಮ್ಮ, ಪೌರಾಯುಕ್ತ ಮನುಕುಮಾರ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಎಂ. ಗಂಗಣ್ಣ ಸೇರಿದಂತೆ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಟಿ. ರಾಜೇಶ್ವರಿ ಕೋರಿದ್ದಾರೆ.
No comments:
Post a Comment