ಸೂಕ್ತ ಕ್ರಮಕ್ಕೆ ಆಗ್ರಹಿಸಿ ನಗರಸಭೆ ಮುಂಭಾಗ ಧರಣಿ ಸತ್ಯಾಗ್ರಹ
ಯೋಧಯೊಬ್ಬರಿಗೆ ಸೇರಿದ ಜಾಗವನ್ನು ಅಕ್ರಮವಾಗಿ ಅತಿಕ್ರಮಿಸಿ ಕಬಳಿಸಲು ಯತ್ನಿಸುತ್ತಿರುವುದನ್ನು ವಿರೋಧಿಸಿ ಬುಧವಾರ ಭದ್ರಾವತಿಯಲ್ಲಿ ಸಾರ್ವಜನಿಕ ಕುಂದು ಕೊರತೆ ಹೋರಾಟ ಸಮಿತಿ ವತಿಯಿಂದ ನಗರಸಭೆ ಮುಂಭಾಗ ಧರಣಿ ಸತ್ಯಾಗ್ರಹ ನಡೆಸಲಾಯಿತು.
ಭದ್ರಾವತಿ, ಆ. ೨: ಯೋಧಯೊಬ್ಬರಿಗೆ ಸೇರಿದ ಜಾಗವನ್ನು ಅಕ್ರಮವಾಗಿ ಅತಿಕ್ರಮಿಸಿ ಕಬಳಿಸಲು ಯತ್ನಿಸುತ್ತಿರುವುದನ್ನು ವಿರೋಧಿಸಿ ಬುಧವಾರ ನಗರದ ಸಾರ್ವಜನಿಕ ಕುಂದು ಕೊರತೆ ಹೋರಾಟ ಸಮಿತಿ ವತಿಯಿಂದ ನಗರಸಭೆ ಮುಂಭಾಗ ಧರಣಿ ಸತ್ಯಾಗ್ರಹ ನಡೆಸಲಾಯಿತು.
ಬೊಮ್ಮನಕಟ್ಟೆ ವಾರ್ಡ್‌ನಂ.೨೩ರಲ್ಲಿರುವ ಸರ್ವೆ ನಂ.೯೧ರ ಬಡಾವಣೆಯಲ್ಲಿ ವಿ. ಗುರುವಯ್ಯನ ಹೆಸರಿನಲ್ಲಿರುವ ಖಾತೆ ನಂ.೧೨೦೨/೩೮, ಸೈಟ್ ನಂ.೩೮ನ್ನು ಅಕ್ರಮವಾಗಿ ಅತಿಕ್ರಮಿಸಿ ಕಬಳಿಸಲು ಯತ್ನಿಸಲಾಗುತ್ತಿದೆ. ತಕ್ಷಣ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗಹಿಸಲಾಯಿತು.
ಸೈಟ್ ನಂ.೭ರ ಸ್ವತ್ತಿನ ಮಾಲೀಕರು ಸೈಟ್ ನಂ.೩೮ರ ಸ್ವತ್ತಿನ ಜಾಗವನ್ನು ಅಕ್ರಮವಾಗಿ ಅತಿಕ್ರಮಿಸಿ ಕಬಳಿಸಲು ಯತ್ನಿಸುತ್ತಿದ್ದಾರೆ. ವಿನಾಕಾರಣ ಯೋಧರ ಕುಟುಂಬಕ್ಕೆ ತೊಂದರೆ ನೀಡುತ್ತಿದ್ದಾರೆ. ಇವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಸ್ವತ್ತಿಗೆ ಸಂಬಂಧಿಸಿದಂತೆ ಉಂಟಾಗಿರುವ ಗೊಂದಲವನ್ನು ತಕ್ಷಣ ಬಗೆಹರಿಸುವ ಮೂಲಕ ನ್ಯಾಯ ಒದಗಿಸಿಕೊಡಬೇಕೆಂದು ಒತ್ತಾಯಿಸಲಾಯಿತು.
ಸಾರ್ವಜನಿಕ ಕುಂದು ಕೊರತೆ ಹೋರಾಟ ಸಮಿತಿ ಅಧ್ಯಕ್ಷ ಬಾಲಕೃಷ್ಣ, ಡಿಎಸ್‌ಎಸ್ ರಾಜ್ಯ ಖಜಾಂಚಿ ಸತ್ಯ ಭದ್ರಾವತಿ, ಪ್ರಗತಿಪರ ಸಂಘಟನೆಗಳ ಮುಖಂಡ ಸುರೇಶ್ ಸೇರಿದಂತೆ ಇನ್ನಿತರರು ಧರಣಿ ಸತ್ಯಾಗ್ರಹ ನೇತೃತ್ವ ವಹಿಸಿದ್ದರು.
ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಚಿನ್ನಯ್ಯ, ಹಾವು ಮಂಜು, ದಾಸ್, ಶ್ಯಾಮ್, ಜಗದೀಶ್, ಚನ್ನಪ್ಪ, ಕಾಣಿಕ್‌ರಾಜ್, ಈಶ್ವರಪ್ಪ ಸೇರಿದಂತೆ ಇನ್ನಿತರರು ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.
ನಗರಸಭೆಯಿಂದ ಪೇಪರ್ ಟೌನ್ ಪೊಲೀಸ್ ಠಾಣೆಗೆ ದೂರು :
ಸರ್ವೆ ನಂ.೯೧ರ ಸೈಟ್ ನಂ.೭ ಮತ್ತು ೩೮ಕ್ಕೆ ಸಂಬಂಧಿಸಿದಂತೆ ನಗರಸಭೆ ವತಿಯಿಂದ ಅಗತ್ಯ ದಾಖಲಾತಿಗಳನ್ನು ಪರಿಶೀಲಿಸಿ ಮಾಹಿತಿ ಪಡೆದುಕೊಂಡಿದ್ದು, ಸೈಟ್ ನಂ.೭ ಮತ್ತು ೩೮ ಬೇರೆ ಬೇರೆಯಾಗಿರುವುದು ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಪೇಪರ್‌ಟೌನ್ ಪೊಲೀಸ್ ಠಾಣೆಗೆ ಪೌರಾಯುಕ್ತ ಮನುಕುಮಾರ್ ದೂರು ನೀಡಿದ್ದಾರೆ.
No comments:
Post a Comment