ಶೇ.೯೦.೧೧ರಷ್ಟು ಗುರಿ ಸಾಧಿಸುವ ಮೂಲಕ ರಾಷ್ಟ್ರ ಮಟ್ಟದ ಪ್ರಶಸ್ತಿಗೆ ಪುರಸ್ಕೃತವಾಗಿದ್ದು, ಈ ಸಾಧನೆಯನ್ನು ಪ್ರಶಂಸಿಸಿ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿಗಳನ್ನು ಅಭಿನಂದಿಸಲಾಯಿತು.
ಭದ್ರಾವತಿ, ಆ. ೧೫ : ನಗರದ ವಿವಿಧೆಡೆ ಹಲವು ವಿಭಿನ್ನ ಕಾರ್ಯಕ್ರಮಗಳೊಂದಿಗೆ ೭೬ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಿಂದ ನಡೆಯಿತು.
ಸಾರ್ವಜನಿಕ ಆಸ್ಪತ್ರೆಗೆ ರಾಷ್ಟ್ರೀಯ ಪ್ರಶಸ್ತಿ : ಪ್ರಶಂಸೆ, ಅಭಿನಂದನೆ
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಳೇನಗರದ ಕನಕಮಂಟಪ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ನಾಗರಾಜ್ ಧ್ವಜಾರೋಹಣ ನೆರವೇರಿಸಿದರು.
ಪೊಲೀಸ್ ನಗರ ವೃತ್ತ ನಿರೀಕ್ಷಕ ಶ್ರೈಶೈಲ ಅವರಿಂದ ಶಾಸಕ ಬಿ.ಕೆ ಸಂಗಮೇಶ್ವರ್ ಪಥಸಂಚಲನ ಗೌರವ ವಂದನೆ ಸ್ವೀಕಸಿದರು.
ನಗರಸಭೆ ಅಧ್ಯಕ್ಷೆ ಶೃತಿ ವಸಂತಕುಮಾರ್, ಉಪಾಧ್ಯಕ್ಷೆ ಸರ್ವಮಂಗಳ ಭೈರಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ಪೌರಾಯುಕ್ತ ಎಚ್.ಎಂ ಮನುಕುಮಾರ್, ತಹಸೀಲ್ದಾರ್ ಗ್ರೇಡ್-೨ ವಿ. ರಂಗಮ್ಮ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಂ. ಗಂಗಣ್ಣ, ನಗರಸಭೆ ಸದಸ್ಯರು, ವಿವಿಧ ಸರ್ಕಾರಿ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಸ್ವಾಗತಿಸಿದರು. ದೈಹಿಕ ಶಿಕ್ಷಕ ಅಪೇಕ್ಷ ಮಂಜುನಾಥ್ ನಿರೂಪಿಸಿದರು.
ಈ ಬಾರಿ ವಿಶೇಷವಾಗಿ ಜಿಲ್ಲೆಯಲ್ಲಿಯೇ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ರಾಷ್ಟ್ರೀಯ ಗುಣಮಟ್ಟದ ಭರವಸೆ ಮಾನದಂಡಗಳು(ಎನ್‌ಕ್ಯೂಎಎಸ್) ಶೇ.೯೦.೧೧ರಷ್ಟು ಗುರಿ ಸಾಧಿಸುವ ಮೂಲಕ ರಾಷ್ಟ್ರ ಮಟ್ಟದ ಪ್ರಶಸ್ತಿಗೆ ಪುರಸ್ಕೃತವಾಗಿದ್ದು, ಈ ಸಾಧನೆಯನ್ನು ಪ್ರಶಂಸಿಸಿ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿಗಳನ್ನು ಅಭಿನಂದಿಸಲಾಯಿತು.
ಭದ್ರಾವತಿ ನ್ಯೂಟೌನ್ ಲಯನ್ಸ್ ಶುಗರ್‌ಟೌನ್ ಕಣ್ಣಿನ ಆಸ್ಪತ್ರೆ ಸಮೀಪದಲ್ಲಿರುವ ಗೃಹ ರಕ್ಷಕದಳ ಕಛೇರಿಯಲ್ಲಿ ೭೬ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು.
ಗೃಹ ರಕ್ಷಕದಳದಿಂದ ಸ್ವಾತಂತ್ರ್ಯ ದಿನಾಚರಣೆ :
ಪ್ರತಿ ವರ್ಷದಂತೆ ಈ ಬಾರಿ ಸಹ ನ್ಯೂಟೌನ್ ಲಯನ್ಸ್ ಶುಗರ್‌ಟೌನ್ ಕಣ್ಣಿನ ಆಸ್ಪತ್ರೆ ಸಮೀಪದಲ್ಲಿರುವ ಗೃಹ ರಕ್ಷಕದಳ ಕಛೇರಿಯಲ್ಲಿ ೭೬ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು.
ಘಟಕಾಧಿಕಾರಿ ಜಗದೀಶ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್, ಡಾ. ರವೀಂದ್ರನಾಥ ಕೋಠಿ ಹಾಗು ಗೃಹ ರಕ್ಷಕರು ಪಾಲ್ಗೊಂಡಿದ್ದರು.
ಭದ್ರಾವತಿ ಹಳೇನಗರದ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಕಾಂಗ್ರೆಸ್ ಪಕ್ಷದ ನಿವೇಶನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ೭೬ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು.
ಸಂಘಟನೆಗೆ ಒತ್ತು ನೀಡಿ, ಕಾಂಗ್ರೆಸ್ ಭವನ ನಿರ್ಮಾಣ : ಭರವಸೆ
ಹಳೇನಗರದ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಕಾಂಗ್ರೆಸ್ ಪಕ್ಷದ ನಿವೇಶನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ೭೬ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು.
ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಮಾತನಾಡಿ, ಪಕ್ಷ ಸಂಘಟನೆ ಪ್ರಸ್ತುತ್ತ ಇನ್ನೂ ಹೆಚ್ಚು ಬಲಗೊಳ್ಳಬೇಕಾದ ಅವಶ್ಯಕತೆ ಇದೆ. ಮುಖಂಡರು, ಕಾರ್ಯಕರ್ತರು ಈ ನಿಟ್ಟಿನಲ್ಲಿ ಹೆಚ್ಚು ಗಮನ ಹರಿಸಬೇಕು. ಸುಸಜ್ಜಿತವಾದ ಕಾಂಗ್ರೆಸ್ ಭವನ ನಿರ್ಮಿಸುವ ಗುರಿ ಇದ್ದು, ಎಲ್ಲರ ಸಹಕಾರದೊಂದಿಗೆ ಭವನ ನಿರ್ಮಾಣಗೊಳ್ಳುವ ವಿಶ್ವಾಸವಿವಿದೆ ಎಂದರು.
ಪಕ್ಷದ ನಗರ ಘಟಕದ ಅಧ್ಯಕ್ಷ ಎಸ್. ಕುಮಾರ್, ವಿವಿಧ ಘಟಕಗಳ ಅಧ್ಯಕ್ಷರು, ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.
ಭದ್ರಾವತಿ ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪದ ಬಿಪಿಎಲ್ ಸಂಘದಿಂದ ೭೬ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ರಾಷ್ಟ್ರಪತಿ ಪದಕ ಪ್ರಶಸ್ತಿ ಪುರಸ್ಕೃತ, ನಿವೃತ್ತ ಪೊಲೀಸ್ ದಾನಂ ಬಾಬು ಧ್ವಜಾರೋಹಣ ನೆರವೇರಿಸಿದರು.
ಬಿಪಿಎಲ್ ಸಂಘದಿಂದ ೭೬ನೇ ಸ್ವಾತಂತ್ರ್ಯ ದಿನಾಚರಣೆ:
ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪದ ಬಿಪಿಎಲ್ ಸಂಘದಿಂದ ೭೬ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ರಾಷ್ಟ್ರಪತಿ ಪದಕ ಪ್ರಶಸ್ತಿ ಪುರಸ್ಕೃತ, ನಿವೃತ್ತ ಪೊಲೀಸ್ ದಾನಂ ಬಾಬು ಧ್ವಜಾರೋಹಣ ನೆರವೇರಿಸಿದರು.
ಸಂಘದ ಅಧ್ಯಕ್ಷ ಎನ್. ಲೋಕೇಶ್ ಅಧ್ಯಕ್ಷೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಸಂಪತ್‌ಕುಮಾರ್, ಪ್ರಧಾನ ಕಾರ್ಯದರ್ಶಿ ಶ್ಯಾಮ್, ಜಗದೀಶ್, ರಾಜು ಹಾಗು ಪದಾಧಿಕಾರಿಗಳು, ಸ್ಥಳೀಯರು ಪಾಲ್ಗೊಂಡಿದ್ದರು.
ಭದ್ರಾವತಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಸ್ತ್ರೀ ಶಮಶಕ್ತಿ ಬ್ಯೂಟಿಷಿಯನ್ ಅಸೋಸಿಯೇಷನ್ ವತಿಯಿಂದ ೭೬ನೇ ಸ್ವಾತಂತ್ರ್ಯ ದಿನಾಚರಣೆ ಜೆಪಿಎಸ್ ಕಾಲೋನಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಸರ್ಕಾರಿ ಶಾಲೆ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಣೆ:
ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಸ್ತ್ರೀ ಶಮಶಕ್ತಿ ಬ್ಯೂಟಿಷಿಯನ್ ಅಸೋಸಿಯೇಷನ್ ವತಿಯಿಂದ ೭೬ನೇ ಸ್ವಾತಂತ್ರ್ಯ ದಿನಾಚರಣೆ ಜೆಪಿಎಸ್ ಕಾಲೋನಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಧ್ವಜಾರೋಹಣ ನೇರವೇರಿಸಿ ಮಕ್ಕಳಿಗೆ ಸಿಹಿ ಹಂಚಿಕೆಯೊಂದಿಗೆ ಲೇಖನ ಸಾಮಾಗ್ರಿಗಳನ್ನು ವಿತರಿಸಲಾಯಿತು. ಅಸೋಸಿಯೇಷನ್ ಅಧ್ಯಕ್ಷೆ ಕವಿತಾ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಮುಖವಾದ ರೂಪ, ಪ್ರೇಮ, ಲಕ್ಷ್ಮಿ, ಸುಮಿತ್ರ, ಆರತಿ, ತೃಪ್ತಿ, ಚಂದ್ರ, ಲೀಲಾ ಹಾಗು ಶಾಲೆಯ ಶಿಕ್ಷಕರು, ಸಿಬ್ಬಂದಿ ವರ್ಗದವರು ಹಾಗು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಭದ್ರಾವತಿ ಸಿದ್ದಾಪುರದಲ್ಲಿರುವ ಸುರಕ್ಷಾ ಸೇವಾ ಟ್ರಸ್ಟ್, ಸುರಕ್ಷಾ ವೃದ್ಧಾಶ್ರಮ ಮತ್ತು ಅನಾಥಾಶ್ರಮದಲ್ಲಿ ೭೬ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು.
ಹಿರಿಯ ಜೀವಿಗಳೊಂದಿಗೆ ಸ್ವಾತಂತ್ರ್ಯ ಸಂಭ್ರಮ :
ನಗರದ ಸಿದ್ದಾಪುರದಲ್ಲಿರುವ ಸುರಕ್ಷಾ ಸೇವಾ ಟ್ರಸ್ಟ್, ಸುರಕ್ಷಾ ವೃದ್ಧಾಶ್ರಮ ಮತ್ತು ಅನಾಥಾಶ್ರಮದಲ್ಲಿ ೭೬ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು.
ವೃದ್ದಾಶ್ರಮದ ಹಿರಿಯ ಜೀವಗಳೊಂದಿಗೆ ಸ್ವಾತಂತ್ರ್ಯ ಸಂಭ್ರಮ ಹಂಚಿಕೊಳ್ಳಲಾಯಿತು. ಟ್ರಸ್ಟ್ ಅಧ್ಯಕ್ಷೆ ಜ್ಯೋತಿ ಸೋಮಶೇಖರ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಗರಸಭೆ ಸದಸ್ಯೆ ನಾಗರತ್ನ ಅನಿಲ್‌ಕುಮಾರ್ ಧ್ವಜಾರೋಹಣ ನೆರವೇರಿಸಿದರು.
ಟ್ರಸ್ಟ್ ಖಜಾಂಚಿ ಪ್ರಶಾಂತ್, ಟ್ರಸ್ಟಿಗಳಾದ ಲಲಿತ, ಅನಿತಾ, ರವೀಂದ್ರಗಿರಿ ಹಾಗು ಸೋಮಶೇಖರ್, ಪ್ರಮುಖರಾದ ಲೀಲಾವತಿ, ಪುಷ್ಪ, ಚೇತನ ಶೆಟ್ಟಿ, ಸೌಮ್ಯ, ಜಾಹ್ನವಿ, ಕಾಂತ, ಮಹೇಶ್ವರಿ, ಸಂಪತ್, ಬಾಲಕೃಷ್ಣ, ದೀಪು, ಪುನೀತ್ ಹಾಗು ಕೆಆರ್‌ಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗು ಸ್ಥಳೀಯರು ಪಾಲ್ಗೊಂಡಿದ್ದರು.
ಭದ್ರಾವತಿ ಪ್ರಧಾನ ಅಂಚೆ ಕಛೇರಿಯಲ್ಲಿ ೭೬ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಕಛೇರಿ ಪೋಸ್ಟ್ ಮಾಸ್ಟರ್ ಆಶಾ ಧ್ವಜಾರೋಹಣ ನೆರವೇರಿಸಿದರು
ಪ್ರಧಾನ ಅಂಚೆ ಕಛೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ:
ನಗರದ ಪ್ರಧಾನ ಅಂಚೆ ಕಛೇರಿಯಲ್ಲಿ ೭೬ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಕಛೇರಿ ಪೋಸ್ಟ್ ಮಾಸ್ಟರ್ ಆಶಾ ಧ್ವಜಾರೋಹಣ ನೆರವೇರಿಸಿದರು.
ವಿಐಸ್‌ಎಲ್ ಕಾರ್ಖಾನೆ ಸಾರ್ವಜನಿಕ ಸಂಪರ್ಕಾಧಿಕಾರಿ ಎಲ್. ಪ್ರವೀಣ್‌ಕುಮಾರ್, ಸ್ತ್ರೀ ರೋಗ ತಜ್ಞೆ ಡಾ. ವೀಣಾ ಎಸ್. ಭಟ್ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಪ್ರಮುಖರಾದ ರಾಜ್‌ಕುಮಾರ್, ಉದಯಚಾರ್, ಸುರೇಶ್, ತುಕಾರಾಮ್, ಓಂಕಾರ್ ಸೇರಿದಂತೆ ಅಂಚೆ ಕಛೇರಿ ಅಧಿಕಾರಿಗಳು, ಸಿಬ್ಬಂದಿಗಳು ಪಾಲ್ಗೊಂಡಿದ್ದರು.
No comments:
Post a Comment