ಆ.೩೧ರಂದು ಬ್ರಹ್ಮಶ್ರೀ ನಾರಾಯಣಗುರುಗಳ ೧೬೯ನೇ ಜಯಂತ್ಯೋತ್ಸವ ಕುರಿತು ಮಂಗಳವಾರ ಭದ್ರಾವತಿಯಲ್ಲಿ ಶ್ರೀ ನಾರಾಯಣಗುರು ವಿಚಾರ ವೇದಿಕೆ ಅಧ್ಯಕ್ಷರು, ಪದಾಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಭದ್ರಾವತಿ, ಆ. ೨೯ : ಶ್ರೀ ನಾರಾಯಣಗುರು ವಿಚಾರ ವೇದಿಕೆ(ಈಡಿಗ ಸಮಾಜದ ೨೬ ಪಂಗಡಗಳ ಒಕ್ಕೂಟ) ಮತ್ತು ಆರ್ಯ ಈಡಿಗ ಮಹಿಳಾ ಸಮಾಜ, ಕೇರಳ ಸಮಾಜ ಹಾಗು ಈಡಿಗ ಸಮಾಜ ಮತ್ತು ಬಿಲ್ಲವ ಸಮಾಜದ ವತಿಯಿಂದ ರಾಷ್ಟ್ರೀ ಯ ಹಬ್ಬಗಳ ಆಚರಣಾ ಸಮಿತಿ ಸಹಕಾರದೊಂದಿಗೆ ಆ.೩೧ರಂದು ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಮಧ್ಯಾಹ್ನ ೧೨ ಗಂಟೆಗೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ನಾರಾಯಣಗುರು ವಿಚಾರ ವೇದಿಕೆ ಅಧ್ಯಕ್ಷ ಎನ್. ನಟರಾಜ್ ಹೇಳಿದರು.
ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬ್ರಹ್ಮಶ್ರೀ ನಾರಾಯಣಗುರು ಅವರ ವಿಚಾರಧಾರೆಗಳು ಇಂದಿನ ಸಮಾಜಕ್ಕೆ ಅವಶ್ಯಕವಾಗಿವೆ. ಅವರ ೧೬೯ನೇ ಜಯಂತ್ಯೋತ್ಸವ ಅರ್ಥಪೂರ್ಣವಾಗಿ ನಡೆಯಬೇಕಾಗಿದ್ದು, ಈ ನಿಟ್ಟಿನಲ್ಲಿ ವೇದಿಕೆ ಹೆಚ್ಚಿನ ಶ್ರಮವಹಿಸುತ್ತಿದೆ ಎಂದರು.
ಅಂದು ಬೆಳಿಗ್ಗೆ ೧೦.೩೦ಕ್ಕೆ ಬ್ರಹ್ಮಶ್ರೀ ನಾರಾಯಣಗುರು ಭಾವಚಿತ್ರದೊಂದಿಗೆ ಲೋಯರ್ ಹುತ್ತಾದಿಂದ ತಾಲೂಕು ಪಂಚಾಯಿತಿವರೆಗೂ ಮೆರವಣಿಗೆ ನಡೆಯಲಿದ್ದು, ನಂತರ ನಡೆಯುವ ವೇದಿಕೆ ಕಾರ್ಯಕ್ರಮವನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಲಿದ್ದಾರೆ. ತಹಸೀಲ್ದಾರ್ ನಾಗರಾಜಪ್ಪ ಅಧ್ಯಕ್ಷತೆ ವಹಿಸಲಿದ್ದು, ಶಿವಮೊಗ್ಗ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅಣ್ಣಪ್ಪ ಮಳಿಮಠ್ ಉಪನ್ಯಾಸ ನೀಡಲಿದ್ದಾರೆ.
ವೇದಿಕೆ ಜಿಲ್ಲಾಧ್ಯಕ್ಷ ಪ್ರವೀಣ್ ಈರೆಗೊಡು, ಕೇರಳ ಸಮಾಜದ ಅಧ್ಯಕ್ಷ ಗಂಗಾಧರ್, ಆರ್ಯ ಈಡಿಗ ಮಹಿಳಾ ಸಂಘದ ತಾಲೂಕು ಅಧ್ಯಕ್ಷೆ ಭಾಗ್ಯಮ್ಮ ಪುಟ್ಟಸ್ವಾಮಿಗೌಡ, ವೇದಿಕೆ ಗೌರವಾಧ್ಯಕ್ಷ ಕೋಗಲೂರು ತಿಪ್ಪೇಸ್ವಾಮಿ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಕೋಗಲೂರು ತಿಪ್ಪೇಸ್ವಾಮಿ, ಗಂಗಾಧರ್ ಸೇರಿದಂತೆ ವೇದಿಕೆ ಪದಾಧಿಕಾರಿಗಳು ಉಪಸ್ಥಿತರಿದ್ದರು.
No comments:
Post a Comment