ಅನಂತರಾಮ
ಭದ್ರಾವತಿ, ಆ. ೫: ನಗರದ ಮೈಸೂರು ಕಾಗದ ಕಾರ್ಖಾನೆ ನಗರಾಡಳಿತ ನೀರು ಸರಬರಾಜು ಇಲಾಖೆಯಲ್ಲಿ ಫ್ಲಂಬರ್‌ಉದ್ಯೋಗಿಯಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ್ದ ಅನಂತರಾಮ(೬೭) ನಿಧನ ಹೊಂದಿದರು.
ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಇದ್ದರು. ಅನಂತರಾಮ ಅವರು ನಿವೃತ್ತಿ ನಂತರ ಬೆಂಗಳೂರಿನಲ್ಲಿ ವಾಸವಾಗಿದ್ದರು. ಶುಕ್ರವಾರ ಸಂಜೆ ಹೃದಯಾಘಾತದಿಂದ ನಿಧನ ಹೊಂದಿದರು. ಇವರ ನಿಧನಕ್ಕೆ ಎಂಪಿಎಂ ಕಾರ್ಮಿಕರ ಸಂಘದ ಮಾಜಿ ಅಧ್ಯಕ್ಷ ಎಸ್. ಚಂದ್ರಶೇಖರ್ ಸೇರಿದಂತೆ ಕಾರ್ಮಿಕ ವರ್ಗದವರು ಸಂತಾಪ ಸೂಚಿಸಿದ್ದಾರೆ.
ಓಂ ಶಾಂತಿ
ReplyDelete