ಭದ್ರಾವತಿ, ಆ. ೧೫: ನಗರದ ಹಳೇಸೇತುವೆ ಮೇಲೆ ಯುವಕನೋರ್ವ ಕೊಲೆಯಾಗಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ.
ತಾಲೂಕಿನ ದೊಡ್ಡೇರಿ ಗ್ರಾಮದ ನಿವಾಸಿ ನರೇಂದ್ರ(೨೫) ಕೊಲೆಯಾಗಿದ್ದು, ಈ ಸಂಬಂಧ ಹಳೇನಗರ ಠಾಣೆ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.
ಕೊಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಹಾಗು ಸ್ಥಳೀಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ಸಂಬಂಧ ಇನ್ನೂ ಪ್ರಕರಣ ದಾಖಲಾಗಿಲ್ಲ.
No comments:
Post a Comment