ಯರೇಹಳ್ಳಿ ಗ್ರಾಮ ಪಂಚಾಯಿತಿ ಅಭಿನಂದನೆ
ಭದ್ರಾವತಿ ತಾಲೂಕಿನ ಯರೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಣೀನರಸೀಪುರ ಗ್ರಾಮದ ನಿವಾಸಿ, ವಿಕಲಚೇತನ ಕ್ರೀಡುಪಟು, ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಎಸ್. ಜ್ಯೋತಿ ಅಂತರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸಿ ಉತ್ತಮ ಸಾಧನೆಯೊಂದಿಗೆ ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಇವರನ್ನು ಮಂಗಳವಾರ ಗ್ರಾಮ ಪಂಚಾಯಿತಿ ಸನ್ಮಾನಿಸಿ ಅಭಿನಂದಿಸಿತು.
ಭದ್ರಾವತಿ, ಆ. ೨೨ : ತಾಲೂಕಿನ ಯರೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಣೀನರಸೀಪುರ ಗ್ರಾಮದ ನಿವಾಸಿ, ವಿಕಲಚೇತನ ಕ್ರೀಡುಪಟು, ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಎಸ್. ಜ್ಯೋತಿ ಅಂತರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸಿ ಉತ್ತಮ ಸಾಧನೆಯೊಂದಿಗೆ ಚಿನ್ನದ ಪದಕ ಪಡೆದುಕೊಂಡಿದ್ದಾರೆ.
ಮಲೇಷಿಯಾದಲ್ಲಿ ಜರುಗಿದ ಕ್ರೀಡಾಕೂಟದ ಪ್ಯಾರ ಥ್ರೋಬಾಲ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದು ದೇಶಕ್ಕೆ ಕೀರ್ತಿ ತಂದಿದ್ದಾರೆ. ಜ್ಯೋತಿಯವರು ಕ್ರೀಡಾ ಕ್ಷೇತ್ರದಲ್ಲಿ ಸಾಕಷ್ಟು ಸಾಧನೆ ಮಾಡಿದ್ದು, ಇವರ ಸಾಧನೆಯನ್ನು ರಾಜ್ಯ ಸರ್ಕಾರ ಗುರುತಿಸಿ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಇದೀಗ ಅಂತರಾಷ್ಟ್ರೀಯ ಮಟ್ಟದಲ್ಲೂ ಜ್ಯೋತಿಯವರು ಸಾಧನೆ ಮಾಡಿರುವುದು ಉಕ್ಕಿನ ನಗರದ ಕೀರ್ತಿ ಪತಾಕೆಯನ್ನು ಮತ್ತಷ್ಟು ಹೆಚ್ಚಿಸಿದೆ.
ಯರೇಹಳ್ಳಿ ಗ್ರಾಮ ಪಂಚಾಯಿತಿ ಅಭಿನಂದನೆ:
ಜ್ಯೋತಿಯವರ ಸಾಧನೆಯನ್ನು ಯರೇಹಳ್ಳಿ ಗ್ರಾಮ ಪಂಚಾಯಿತಿ ಪ್ರಶಂಸಿಸುವ ಜೊತೆಗೆ ಅಭಿನಂದಿಸಿದೆ. ಮಂಗಳವಾರ ಪಂಚಾಯಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷೆ ಶಾಂತಬಾಯಿ ರಮೇಶ್ .ಬಿ ಅಧ್ಯಕ್ಷತೆ ವಹಿಸಿದ್ದರು. ಪಂಚಾಯಿತಿ ಉಪಾಧ್ಯಕ್ಷರು, ಸದಸ್ಯರು, ಅಭಿವೃದ್ಧಿ ಅಧಿಕಾರಿ ಹಾಗು ಸಿಬ್ಬಂದಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
No comments:
Post a Comment