ಭದ್ರಾವತಿ ಜಾತ್ಯಾತೀತ ಜನತಾದಳ ಪರಿಶಿಷ್ಟ ಜಾತಿ ಘಟಕದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಮಂಗಳವಾರ ಉಜ್ಜನಿಪುರ ವೆಂಕಟೇಶ್ ರಾಜೀನಾಮೆ ಸಲ್ಲಿಸಿದ್ದಾರೆ.
ಭದ್ರಾವತಿ, ಆ. ೨೨ : ಜಾತ್ಯಾತೀತ ಜನತಾದಳ ಪರಿಶಿಷ್ಟ ಜಾತಿ ಘಟಕದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಮಂಗಳವಾರ ಉಜ್ಜನಿಪುರ ವೆಂಕಟೇಶ್ ರಾಜೀನಾಮೆ ಸಲ್ಲಿಸಿದ್ದಾರೆ.
ಪಕ್ಷದ ನಗರ ಘಟಕದ ಅಧ್ಯಕ್ಷ ಆರ್. ಕರುಣಾಮೂರ್ತಿಯವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದು, ಕಳೆದ ಸುಮಾರು ೮ ತಿಂಗಳಿನಿಂದ ಪ್ರಧಾನ ಕಾರ್ಯದರ್ಶಿ ಹುದ್ದೆ ಪ್ರಾಮಾಣಿಕವಾಗಿ ನಿರ್ವಹಿಸಿದ್ದೇನೆ. ಇದೀಗ ವೈಯಕ್ತಿಕ ಕಾರಣಗಳಿಂದ ಹುದ್ದೆ ನಿರ್ವಹಿಸಲು ಸಾಧ್ಯವಾಗದಿರುವ ಹಿನ್ನಲೆಯಲ್ಲಿ ಹುದ್ದೆಗೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ರಾಜೀನಾಮೆ ಪತ್ರದಲ್ಲಿ ವೆಂಕಟೇಶ್ ಮನವರಿಕೆ ಮಾಡಿದ್ದಾರೆ.
No comments:
Post a Comment